Karnataka SSLC Result 2022 Date & Time : ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ ಪ್ರಕಟ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟ ಮಾಡಲಿದೆ. ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ 2022 ಫಲಿತಾಂಶ ನಾಳೆ ಪ್ರಕಟ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಮೇ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಈ ಮುಂಚೆಯೇ ಹೇಳಿದ್ದರು. ಅದರನ್ವಯ ಇದೀಗ ನಾಳೆ ಫಲಿತಾಂಶ ಘೋಷಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು "ಕರ್ನಾಟಕ ರಾಜ್ಯ ಎಸ್‌ಎಸ್ಎಲ್‌ಸಿ ಫಲಿತಾಂಶವು ನಾಳೆ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ ನಲ್ಲಿ ಹಾಗೂ ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. ಅದಲ್ಲದೆ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ" ಎಂದು ಹೇಳುವುದರ ಶೋಭ ಕೋರಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ಕರ್ನಾಟಕದೆಲ್ಲೆಡೆ ಒಟ್ಟು 3,440 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಪರೀಕ್ಷೆಗೆ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು, ಈ ಪೈಕಿ 4.21 ಲಕ್ಷ ವಿದ್ಯಾರ್ಥಿನಿಯರು ಮತ್ತು 4.52 ಲಕ್ಷ ವಿದ್ಯಾರ್ಥಿಗಳಿದ್ದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ 2022 ಫಲಿತಾಂಶ ನಾಳೆ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2022 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೆಪ್ 1 : ಅಧಿಕೃತ ವೆಬ್‌ಸೈಟ್‌ sslc.karnataka.gov.in ಮತ್ತು karresults.nic.in. ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ

ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ 2022 ಫಲಿತಾಂಶ ನಾಳೆ ಪ್ರಕಟ

ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ತೆರವುಗೊಳಿಸಲು ವಿದ್ಯಾರ್ಥಿಗಳು ಕನಿಷ್ಠ ಶೇಕಡಾ 35 ಅಂಕಗಳನ್ನು ಗಳಿಸಬೇಕು. ಅಭ್ಯರ್ಥಿಗಳು ಎಲ್ಲಾ ವೈಯಕ್ತಿಕ ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ವಿಭಾಗೀಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

KSEEB ಕರ್ನಾಟಕ ಬೋರ್ಡ್ 10 ನೇ ತರಗತಿಯ ಪೂರಕ ಪರೀಕ್ಷೆಗಳನ್ನು ಜೂನ್ ಕೊನೆಯ ವಾರದಲ್ಲಿ ನಡೆಸಲಾಗುವುದು. ಅನುತ್ತೀರ್ಣರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಬಹುದು.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್- sslc.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam results will release on may 19. Here is the details about when results will announce and how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X