Karnataka SSLC Result 2022 : ಮೇ ಎರಡನೇ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಇಂದು ಕೀ ಉತ್ತರಗಳು ಪ್ರಕಟ

ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಪೂರ್ಣಗೊಂಡಿದ್ದು, ಫಲಿತಾಂಶವು ಮೇ ಎರಡನೇ ವಾರದಲ್ಲಿ ಪ್ರಕಟವಾಗಲಿದೆ. ಪರೀಕ್ಷೆಯ ಕೀ ಉತ್ತರಗಳನ್ನು ಇಂದು ಪ್ರಕಟಿಸಲಾಗುವುದು ಮತ್ತು ಪೂರಕ ಪರೀಕ್ಷೆಗಳನ್ನು ಜೂನ್‌ ತಿಂಗಳ ಕೊನೆಯ ವಾರದಲ್ಲಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 2ನೇ ವಾರ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11,2022ರ ವರೆಗೆ ನಡೆಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎಲ್ಲಾ ವಿಷಯಗಳು ಸುಸೂತ್ರವಾಗಿ ನಡೆದಿದ್ದು, ಫಲಿತಾಂಶವು ಮೇ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಹತ್ತನೇ ತರಗತಿಯ ಪೂರಕ ಪರೀಕ್ಷೆಯು ಜೂನ್ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 2ನೇ ವಾರ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಕೀ ಉತ್ತರಗಳು ಇಂದು ಬಿಡುಗಡೆ :

೨೦೨೨ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಂದಿನಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಪರೀಕ್ಷೆಯ ಎಲ್ಲಾ ವಿಷಯಗಳಿಗೆ ಕೀ ಉತ್ತರಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು. ಈ ಮೂಲಕ ವಿದ್ಯಾರ್ಥಿಗಳು ತಮ್ಮ ತಾತ್ಕಾಲಿಕ ಅಂಕಗಳನ್ನು ಅಂದಾಜು ಮಾಡಲು ಸಾಧ್ಯವಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 2ನೇ ವಾರ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ? :

ಕರ್ನಾಟಕ ಎಸ್‌ಎಸ್‌ಎಲ್‌ಸಿ 2022ರ ಫಲಿತಾಂಶ ಬಿಡುಗಡೆಗೆ ಯಾವುದೇ ದೃಢೀಕೃತ ದಿನಾಂಕವನ್ನು ಘೋಷಿಸಲಾಗಿಲ್ಲ. ಆದಾಗ್ಯೂ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಫಲಿತಾಂಶ ಪ್ರಕಟವಾಗುವ ನಿಖರವಾದ ದಿನಾಂಕವನ್ನು ಮಂಡಳಿಯು ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿದ ನಂತರ ಮತ್ತು ಫಲಿತಾಂಶದ ಡೇಟಾವನ್ನು ಸಂಸ್ಕರಿಸಿದ ನಂತರ ಮಾತ್ರ ಸೂಚಿಸಲಾಗುತ್ತದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ - sslc.karnataka.gov.in ಗೆ ಭೇಟಿ ನೀಡುವ ಮೂಲಕ ವೀಕ್ಷಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc result 2022 to be release on 2nd week of may and answer key to be release today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+