Karnataka SSLC Results 2020 Declared: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ರಿಲೀಸ್

2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಔಟ್

ಈ ವರ್ಷ ಒಟ್ಟಾರೆ ಶೇಕಡ.71.80 ಫಲಿತಾಂಶ ಬಂದಿದೆ. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 5,82,316 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಸರ್ಕಾರಿ ಶಾಲೆಗಳ ಫಲಿತಾಂಶ ಶೇಕಡ.72.79 ಬಂದಿದೆ. ಪರೀಕ್ಷೆಬರೆದವರ ಪೈಕಿ 2.28,734 ಅನುತ್ತೀರ್ಣರಾಗಿದ್ದಾರೆ. ಈ ಬಾರಿ 6 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. 620 ಅಂಕಗಳನ್ನು 68 ವಿದ್ಯಾರ್ಥಿಗಳು ಗಳಿಸಿದ್ದಾರೆ. ಈ ಬಾರಿ ಅನುದಾನಿತ ಶಾಲೆಗಳ ಪೈಕಿ ಶೇಕಡ.70.60 ಫಲಿತಾಂಶ, ಅನುದಾನರಹಿತ ಶಾಲೆಗಳ ಪೈಕಿ ಶೇಕಡ.82.31 ಫಲಿತಾಂಶ ಬಂದಿದೆ.

ಈ ಹಿಂದೆ 2019 ರಲ್ಲಿ ಏಪ್ರಿಲ್ 30 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಒಟ್ಟು 8,25,468 ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆ ಬರೆದಿದ್ದರು. ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇಕಡ.73.7 ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದರು. ಶೇಕಡ.79.59 ರಷ್ಟು ಹೆಣ್ಣು ಮಕ್ಕಳು, ಶೇಕಡ.68.46 ರಷ್ಟು ಗಂಡು ಮಕ್ಕಳು ಪಾಸ್ ಆಗಿದ್ದರು. ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದರು.

ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿದ್ದು ಅಧಿಕೃತ ವೆಬ್‌ಸೈಟ್‌ನಲ್ಲಿ ಸರ್ವರ್ ಬ್ಯುಸಿ ಆದಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೆಳಗೆ ನೀಡಿರುವ ವೆಬ್‌ಸೈಟ್ ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

http://www.karresults.nic.in/

http://www.results.nic.in/

https://www.examresults.net/

http://www.indiaresults.com/select-state.htm

http://kseeb.kar.nic.in/

Karnataka SSLC ಫಲಿತಾಂಶ ಚೆಕ್ ಮಾಡುವುದು ಹೇಗೆ?:

ಸ್ಟೆಪ್ 1: ಆಫೀಶಿಯಲ್ ಸೈಟ್ http://kseeb.kar.nic.in/ ಗೆ ವಿಸಿಟ್ ಮಾಡಿ

ಸ್ಟೆಪ್ 2: ಕರ್ನಾಟಕ 'ಎಸ್‌ಎಸ್‌ಎಲ್‌ಸಿ ಪರೀಕ್ಷೆ 2020ರ ಫಲಿತಾಂಶ' ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 5: ಸ್ಕ್ರೀನ್ ಮೇಲೆ ಫಲಿತಾಂಶ ಪ್ರಕಟವಾಗುತ್ತದೆ

ಸ್ಟೆಪ್ 6: ರಿಸಲ್ಟ್ ನೋಡಿದ ಬಳಿಕ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc exam reults 2020 released and here is the steps to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+