Karnataka SSLC Results 2020 Highlights : ಎಸ್‌ಎಸ್‌ಎಲ್‌ಸಿ ಫಲಿತಾಂಶ; ಈ ಭಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ

2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಪರೀಕ್ಷಾ ಫಲಿತಾಂಶದ ಪ್ರಮುಖಾಂಶಗಳು ಇಲ್ಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ವಿವರ

ಕರ್ನಾಟಕದಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡರು. ಒಟ್ಟು 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪರೀಕ್ಷೆಯ ಮೌಲ್ಯಮಾಪನ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಸುಮಾರು 52,219 ಮೌಲ್ಯಮಾಪಕರು ಸುಮಾರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದಾರೆ. ಈ ಭಾರಿ 71.80 ಶೇಕಡಾವಾರು ಫಲಿತಾಂಶವಾಗಿದೆ. ಕಳೆದ ವರ್ಷ 73.70 ಫಲಿತಾಂಶ ಪ್ರಕಟಿಸಲಾಗಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣರಾಗಿದ್ದಾರೆ.

ಬಾಲಕರು ಶೇ.66.41 ಉತ್ತೀರ್ಣರಾಗಿದ್ದಾರೆ 77.74 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಭಾರಿ 625 ಅಂಕಕ್ಕೆ 625 ಅಂಕಗಳನ್ನು 6 ಜನ ಪಡೆದಿದ್ದಾರೆ. ಕಳೆದ ಬಾರಿ ಇಬ್ಬರು 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದರು. ಹಾಗೆ ಎಂದಿನಂತೆ ಈ ವರ್ಷವೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam reults 2020 released and here is the highlights of result.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X