ಮಾರ್ಚ್/ಏಪ್ರಿಲ್-2022ರ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವು ಈಗಾಗಲೇ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾಪ್ರತಿಗಾಗಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಇಲ್ಲಿದೆ.

ಪ್ರಮುಖ ದಿನಾಂಕಗಳು:
ಜೂನ್/ಜುಲೈ -2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಖ: 20.5.2022
ಜೂನ್/ಜುಲೈ-2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30.5.2022
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್ಲೈನ್ ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕವನ್ನು ಬ್ಯಾಂಕಿಗೆ ಪಾವತಿಸಲ ಅಂತಿಮ ದಿನಾಂಕ: 31.5.2022
ಜೂನ್/ಜುಲೈ-2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24.5.2022
ಜೂನ್/ಜುಲೈ-2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
6.6.2022
ಜೂನ್/ಜುಲೈ-2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24.5.2022
ಜೂನ್/ಜುಲೈ-2022ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಮೌಲ್ಯಮಾನಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
6.6.2022
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್ಲೈನ್ ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ
ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕವನ್ನು ಬ್ಯಾಂಕಿಗೆ ಪಾವತಿಸಲು ಅಂತಿಮ ದಿನಾಂಕ: 7.6.2022

ಛಾಯಾಪ್ರತಿ ಮತ್ತು ಮರುಮೌಲ್ಯಮಾಪನ ಶುಲ್ಕದ ವಿವರ:
ವಿಷಯ ಆನ್ಲೈನ್ ಮೂಲಕ ಪಾವತಿಸಿದಲ್ಲಿ ಶುಲ್ಕ ಆಫ್ಲೈನ್ ಚಲನ್ ಮೂಲಕ ಪಾವತಿಸಿದಲ್ಲಿ ಶುಲ್ಕ
ಛಾಯಾಪ್ರತಿ ಒಂದು ವಿಷಯಕ್ಕೆ 410/-ರೂ 420/-ರೂ
ಮರುಮೌಲ್ಯಮಾಪನ ಒಂದು ವಿಷಯಕ್ಕೆ 81೦/-ರೂ 820/-ರೂ
ವಿದ್ಯಾರ್ಥಿಗಳು ನೇರವಾಗಿ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಛಾಯಾ ಪ್ರತಿಯನ್ನು ಪಡೆಯಬೇಕಾಗಿರುತ್ತದೆ. ಛಾಯಾ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಖಚಿತಪಡಿಸಿಕೊಂಡ ನಂತರವೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಮಂಡಳಿಯ ವೆಚ್ಚದಲ್ಲಿ ಪರಿಷ್ಕೃತ ಫಲಿತಾಂಶಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ಈ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ರವಾನಿಸಲಾಗುವುದು.
ಮರುಎಣಿಕೆ ಅಥವಾ ಮರುಮೌಲ್ಯಮಾಪನ ಸೇವೆಯನ್ನು ಪಡೆಯಬೇಕಾದಲ್ಲಿ ಸ್ಕ್ಯಾನ್ ಪ್ರತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗುತ್ತದೆ. ಸ್ಕ್ಯಾನ್ ಪ್ರತಿ ಮತ್ತು ಮರು ಮೌಲ್ಯಮಾಪನಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಸಲು ವೆಬ್ಸೈಟ್ https://sslc.karnataka.gov.in/ ಗೆ ಭೇಟಿ ನೀಡಬಹುದು.
ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವಂತಿದ್ದಲ್ಲಿ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.