Karnataka SSLC Supplementary Result 2021 : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ; ಆಳ್ವಾಸ್ ವಿದ್ಯಾರ್ಥಿನಿ ಪ್ರಥಮ

ಕರ್ನಾಟಕ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಇಂದು ಘೋಷಣೆ ಮಾಡಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಪೂರಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗ್ರೀಸ್ಮಾ ನಾಯ್ಕ್ 599 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

 
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಔಟ್‌ : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗ್ರೀಸ್ಮಾ ಪ್ರಥಮ

ರಾಜ್ಯದಾದ್ಯಂತ 352 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 27 ಮತ್ತು 29,2021 ರಂದು ನಡೆಸಲಾಗಿತ್ತು. ಪರೀಕ್ಷೆಗೆ ಒಟ್ಟು 53,125 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 29,522 ವಿದ್ಯಾರ್ಥಿಗಳು ಪಾಸ್ ಆಗಿದ್ದು ಶೇ.55.54 ಫಲಿತಾಂಶ ಬಂದಿದೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಮೂಡಬಿದರಿಯ ಆಳ್ವಾಸ್ ​ ಕಾಲೇಜಿನ ವಿದ್ಯಾರ್ಥಿನಿ ಗ್ರೀಸ್ಮಾ ನಾಯ್ಕ್ ಫೀಸ್ ಕಟ್ಟಿಲ್ಲದ ಕಾರಣದಿಂದಾಗಿ ಪರೀಕ್ಷೆಗೆ ನೋಂದಣಿ ಮಾಡಿರಲಿಲ್ಲ. ಹೀಗಾಗಿ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಸ್ಮಾ ನಾಯ್ಕ್ ವಂಚಿತಳಾಗಿದ್ದರು. ಆದರೆ ಪೂರಕ ಪರೀಕ್ಷೆಗೆ ಹಾಜರಾಗಿ 599 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಈ ಭಾರಿಯ ಪೂರಕ ಪರೀಕ್ಷೆಯಲ್ಲಿಯೂ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. 17,973 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು, ಅದರಲ್ಲಿ 10,290 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಶೆ.57.25ರಷ್ಟು ಪಾಸಾಗಿದ್ದಾರೆ. ಬಾಲಕರು 35,182 ಮಂದಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 19,232 ಮಂದಿ ಪಾಸಾಗಿ ಶೆ.54.66 ಫಲಿತಾಂಶ ಪಡೆದಿದ್ದಾರೆ.

ಫಲಿತಾಂಶ ವಿವರಗಳನ್ನು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಮಧ್ಯಾಹ್ನ 3 ಗಂಟೆಯ ನಂತರ ಕಳುಹಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2020-21ನೇ ಸಾಲಿನ ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷೆಗಳನ್ನು ಎರಡು ದಿನ ಮಾತ್ರ ನಡೆಸಲಾಗಿತ್ತು. ಜು.19 ರಂದು ಕೋರ್ ವಿಷಯಗಳಿಗೆ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ಮತ್ತು ಜು.22ರಂದು ಭಾಷಾ ವಿಷಯಗಳಿಗೆ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆಗಳು ನಡೆದಿದ್ದವು. ಪ್ರತಿ ವಿಷಯಕ್ಕೂ ಗರಿಷ್ಠ 40 ಅಂಕಗಳನ್ನು ಮೀಸಲಿಡಲಾಗಿತ್ತು. 3 ವಿಷಯಗಳಿಂದ ಒಟ್ಟು 120 ಅಂಕಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್‌ 9 ರಂದೇ ಬಿಡುಗಡೆ ಮಾಡಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶದಿಂದ ತೃಪ್ತಿಯಾಗದ ವಿದ್ಯಾರ್ಥಿಗಳು ಮತ್ತು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ ನಲ್ಲಿ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಅಂತಹ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

 

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಗೆ ಭೇಟಿ ನೀಡಿ
ಸ್ಟೆಪ್ 2 : ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ವಿದ್ಯಾರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಫಲಿತಾಂಶ ಪ್ರಕಟವಾದ ಬಳಿಕ ಮತ್ತು ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka sslc supplementary exam result released today by education minister bc nagesh. Alvas student grisma naik ranked first.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X