Karnataka SSLC Supplementary Result 2021 : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಕರ್ನಾಟಕ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್‌ ಅವರು ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಸೆಪ್ಟೆಂಬರ್ 27 ಮತ್ತು 29,2021 ರಂದು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಫಲಿತಾಂಶ ಇಂದು (ಅಕ್ಟೋಬರ್​ 11) ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.

ರಾಜ್ಯಾದ್ಯಂತ 352 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಗೆ ಹೊಸ ಹಾಗೂ ಖಾಸಗಿ ಒಟ್ಟು 53,125 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ತದನಂತರ ನೊಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 27 ಮತ್ತು 29,2021ರಂದು ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆ ನಡೆದ ಕೇವಲ 11 ದಿನದಲ್ಲಿ ಎಸ್ಎಸ್ಎಲ್‌ಸಿ ಬೋರ್ಡ್ ಫಲಿತಾಂಶ ಘೋಷಿಸುತ್ತಿದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಗೆ ಭೇಟಿ ನೀಡಿ
ಸ್ಟೆಪ್ 2 : ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ವಿದ್ಯಾರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಫಲಿತಾಂಶ ಪ್ರಕಟವಾದ ಬಳಿಕ ಮತ್ತು ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc supplementary exam result to be release today by education minister bc nagesh.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+