Karnataka SSLC Supplementary Result 2022 : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಕರ್ನಾಟಕ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಒಟ್ಟಾರೆ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು "ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್ ನಲ್ಲಿ ವೀಕ್ಷಿಸಬಹುದು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ." ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಜೂನ್ 27 ರಿಂದ ಜುಲೈ 4 2022 ರವರೆಗೆ ನಡೆಸಲಾಗಿತ್ತು. ಪ್ರಸಕ್ತ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಮೇ 19, 2022 ರಂದು ಬಿಡುಗಡೆಯಾಗಿದ್ದು, ಈ ವರ್ಷ ಒಟ್ಟು 8,53,436 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಅದರಲ್ಲಿ 7, 30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.85.63ರಷ್ಟು ಉತ್ತೀರ್ಣರಾಗಿದ್ದಾರೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಗೆ ಭೇಟಿ ನೀಡಿ
ಸ್ಟೆಪ್ 2 : ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ವಿದ್ಯಾರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc supplementary exam 2022 results released. Students can access results on website at 12 noon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+