Karnataka SSLC Time Table 2021 : ಜು.19 ಮತ್ತು ಜು.22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ನಿಗದಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಔಟ್

2020-21ನೇ ಸಾಲಿನ ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟ ಮಾಡಲಾಗಿದ್ದು, ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಎರಡು ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜು.19 ರಂದು ಕೋರ್ ವಿಷಯಗಳಿಗೆ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ಮತ್ತು ಜು.22ರಂದು ಭಾಷಾ ವಿಷಯಗಳಿಗೆ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಔಟ್

ಇಂದು ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಲಾಗಿತ್ತು. ತದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕಗಳನ್ನು ಘೋಷಿಸಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಶಾಲೆಗಳಿಗೆ ಜೂನ್ 30ರಂದು ತಲುಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಪ್ರಸಕ್ತ ವರ್ಷ 8,76,581 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ 8 ಲಕ್ಷದ 46 ಸಾವಿರ ವಿದ್ಯಾರ್ಥಿಳು ಪರೀಕ್ಷೆಗೆ ಹಾಜರಾಗಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆಗೆಂದೇ ಈ ವರ್ಷ 73,066 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಇರಲಿದೆ ಎಂದಿದ್ದಾರೆ.

ಕೊರೊನಾ ಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗುವುದು. ಕೊರೊನಾ ಪಾಸಿಟಿವ್​ ಇರುವ ವಿದ್ಯಾರ್ಥಿಯು ಪರೀಕ್ಷೆ ಬರೆಯುವ ಆಸೆ ಇದ್ದರೆ, ಹತ್ತಿರದ ಕೊವಿಡ್​ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಹಾಗೂ ಅವರನ್ನು ಹೊಸ ವಿದ್ಯಾರ್ಥಿ ಎಂದು ಪರಿಗಣಿಸಲಾಗುವುದು. ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದಾರೆ. ಅವರು ತಮ್ಮ ಹತ್ತಿರದ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯಬಹುದು ಎಂದು ತಿಳಿಸಿದ್ದಾರೆ.

ಮುಖ್ಯವಾಗಿ ಈ ಭಾರಿ ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಅಧಿಕಾರಿಗಳು, ಶಿಕ್ಷಕರು, ಪೋಷಕರು ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು. ಒಂದು ವಾರದ ಒಳಗೆ ಎಲ್ಲರೂ ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯಿಂದ ಆದೇಶ ಹೋಗಲಿದೆ ಎಂದಿದ್ದಾರೆ. ಸಿಬ್ಬಂದಿಯಲ್ಲಿ ಕೊರೊನಾ ಲಕ್ಷಣಗಳಿದ್ದರೆ ಅವರನ್ನು ಪರೀಕ್ಷೆಯ ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka SSLC Time Table 2021: Exams to be held on two days this year. July 19th core subjects -- Mathematics, Science and Social Science. July 22nd Languages. Take a look
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X