Karnataka Schools And Colleges : ಶಾಲಾ ಕಾಲೇಜು ಬಂದ್ ತೀರ್ಮಾನ ಆಯಾ ಜಿಲ್ಲಾಧಿಕಾರಿಗಳಿಗೆ ಬಿಟ್ಟ ಸರ್ಕಾರ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ಸಂಬಂಧಿತ ಅನೇಕ ಕಠಿಣ ನಿಯಮಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಜನವರಿ ೩೧ರ ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಶಾಲಾ ಕಾಲೇಜು ಬಂದ್ ಆಗುತ್ತಾ ?

ಸಭೆಯಲ್ಲಿ ರಾಜ್ಯದ ಶಾಲೆ ಹಾಗೂ ಕಾಲೇಜುಗಳನ್ನು ಮುಚ್ಚುವ ಕುರಿತು ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಪ್ರತಿ ಜಿಲ್ಲೆಗಳಲ್ಲಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳುವುದು ಆಯಾ ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆಯೂ ಸರ್ಕಾರ ಸೂಚಿಸಿದೆ. ಒಂದೇ ಶಾಲೆಯಲ್ಲಿ ಹೆಚ್ಚು ಮಕ್ಕಳು ಕೋವಿಡ್ ಸೋಂಕಿಗೆ ಒಳಗಾದಲ್ಲಿ ಆ ಶಾಲೆಯನ್ನು ಮುಚ್ಚುವ ತೀರ್ಮಾನವನ್ನು ಶಾಲಾ ಮುಖ್ಯಪಾಧ್ಯಾಯರು, ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಜಿಲ್ಲಾಧಿಕಾರಿಗಳ ಸಲಹೆ ಪಡೆದು ತೆಗೆದುಕೊಳ್ಳಬಹುದು ಎಂದು ಹೇಳಲಾಗಿದೆ. ಮಕ್ಕಳಿಗೆ ಭೌತಿಕ ತರಗತಿಗಳು ಮತ್ತು ಇತರೆ ಶೈಕ್ಷಣಿಕ ಕಾರ್ಯಚಟುವಟಿಕೆಗಳು ಎಂದಿನಂತೆಯೇ ನಡೆಯಲಿದ್ದು, ಇನ್ನುಮುಂದೆ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಶಾಲೆಗಳಿಗೆ ಸೂಚಿಸಲಾಗಿದೆ ಎಂದರು.

ಈ ಮುಂಚೆ ಬೆಂಗಳೂರು ನಗರ ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹೊರತುಪಡಿಸಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು ಜನವರಿ 6-2022 ರಿಂದ ಜಾರಿಗೆ ಬರುವಂತೆ 10, 11 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜುಗಳು ಬಂದ್ ಮಾಡಲಾಗುತ್ತದೆ ಎಂದು ಮಾರ್ಗಸೂಚಿ ಹೊರಡಿಸಲಾಗಿತ್ತು. ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕರೆಯಿಸದೆ ಆನ್‌ಲೈನ್ ಮೂಲಕ ಮಾತ್ರ ತರಗತಿಗಳನ್ನು ನಡೆಸಲು ಸೂಚಿಸಲಾಗಿತ್ತು ಇದು ಪದವಿ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ಸಚಿವರು ತಿಳಿಸಿದ್ದರು.

ರಾಜ್ಯಕ್ಕೆ ಇಂದು ಘೋಷಿಸಿರುವ ಇನ್ನಷ್ಟು ಕಠಿಣ ಮಾರ್ಗಸೂಚಿಗಳಿವು :

* ಎಲ್ಲಾ ರ್ಯಾಲಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತೆರೆದ ಸ್ಥಳಗಳಲ್ಲಿ 200 ಕ್ಕಿಂತ ಹೆಚ್ಚು ಜನರು ಮತ್ತು ಮುಚ್ಚಿದ ಸ್ಥಳಗಳಲ್ಲಿ 100 ಜನರನ್ನು ಒಳಗೊಂಡಂತೆ ಮದುವೆ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.

* BMRCL ಸೇರಿದಂತೆ ಸಾರ್ವಜನಿಕ ಸಾರಿಗೆಯು ಆಸನ ಸಾಮರ್ಥ್ಯದ ಪ್ರಕಾರ ಮಾತ್ರ ಕಾರ್ಯನಿರ್ವಹಿಸುತ್ತದೆ.

* ಬಿಬಿಎಂಪಿ ಮುಖ್ಯ ಕಮಿಷನರ್ ಮತ್ತು ಜಿಲ್ಲೆಗಳ ಡೆಪ್ಯುಟಿ ಕಮಿಷನರ್‌ಗಳು ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ವಿಧಿಸಬಹುದು ಎಂದು ಪುನರುಚ್ಚರಿಸಲಾಗಿದೆ.

* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಮಹಾರಾಷ್ಟ್ರ, ಕೇರಳ ಮತ್ತು ಗೋವಾದ ಗಡಿಯಲ್ಲಿ ತೀವ್ರ ನಿಗಾ ಇಡಬೇಕು.

For Quick Alerts
ALLOW NOTIFICATIONS  
For Daily Alerts

English summary
Karnataka government took some strict guideline to control covid situation. What about schools and colleges here is the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X