ಸಾರ್ವಜನಿಕ ಶಿಕ್ಷಣ ಇಲಾಖೆ 10,611 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಹೈದರಾಬಾದ್-ಕರ್ನಾಟಕ ಪ್ರದೇಶದ 6 ಜಿಲ್ಲೆಗಳೂ ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಒಟ್ಟು 10,611 ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 10 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಬಂದ ಪ್ರಕಟಣೆ ಏನೆಂದರೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಅವಧಿಯ ವಿಸ್ತರಣೆ ಮಾಡಲಾಗಿದ್ದು ಅಭ್ಯರ್ಥಿಗಳು ಏಪ್ರಿಲ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಹೋಗಿ.

ಸ್ಟೆಪ್ 2: ನಂತರ ಅಲ್ಲಿ ನೀಡಲಾಗಿರುವ "Last Date For Applying Online For Graduate Primary School Teacher Recuitment-2019 Is Extended Upto 18/4/2019" ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2019 ರಲ್ಲಿ ನೀಡಲಾಗಿರುವ ಆಯ್ಕೆಗಳಲ್ಲಿ ನೀವು ಹೈದರಾಬಾದ್ ಕರ್ನಾಟಕದವರಾಗಿದ್ದಲ್ಲಿ ಪರೀಕ್ಷೆ 1 ಆಯ್ಕೆ ಮಾಡಿ ಅಥವಾ ಹೈದರಾಬಾದ್ ಕರ್ನಾಟಕದವರಾಗಿರದಿದ್ದಲ್ಲಿ ಪರೀಕ್ಷೆ 2 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನೀವು ನ್ಯೂ ಯೂಸರ್ ಆಗಿದ್ದಲ್ಲಿ ನಿಮ್ಮ ಹೆಸರು,ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 6: ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಮುದ್ರಿತ ಮೂಲ ಪ್ರತಿಯನ್ನು ಪಡೆದುಕೊಂಡು ಸಂರಕ್ಷಿಸಿ ಇಟ್ಟುಕೊಳ್ಳತಕ್ಕದ್ದು

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಮಾಡಲಾಗಿರುವ ಅವಧಿ ವಿಸ್ತರಣೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಮುನ್ನ ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Government of karnataka recruitment for 10,611 Graduate primary school teachers application date extended to 18th april 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+