ಸಾರ್ವಜನಿಕ ಶಿಕ್ಷಣ ಇಲಾಖೆ 10,611 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಹೈದರಾಬಾದ್-ಕರ್ನಾಟಕ ಪ್ರದೇಶದ 6 ಜಿಲ್ಲೆಗಳೂ ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಒಟ್ಟು 10,611 ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

 

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 18 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಬಂದ ಪ್ರಕಟಣೆ ಏನೆಂದರೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಅವಧಿಯ ವಿಸ್ತರಣೆ ಮಾಡಲಾಗಿದ್ದು ಅಭ್ಯರ್ಥಿಗಳು ಏಪ್ರಿಲ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 10,611 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಹೋಗಿ

ಸ್ಟೆಪ್ 2: ನಂತರ ಅಲ್ಲಿ ನೀಡಲಾಗಿರುವ "Last Date For Applying Online For Graduate Primary School Teacher Recuitment-2019 Is Extended Upto 25/4/2019" ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2019 ರಲ್ಲಿ ನೀಡಲಾಗಿರುವ ಆಯ್ಕೆಗಳಲ್ಲಿ ನೀವು ಹೈದರಾಬಾದ್ ಕರ್ನಾಟಕದವರಾಗಿದ್ದಲ್ಲಿ ಪರೀಕ್ಷೆ 1 ಆಯ್ಕೆ ಮಾಡಿ ಅಥವಾ ಹೈದರಾಬಾದ್ ಕರ್ನಾಟಕದವರಾಗಿರದಿದ್ದಲ್ಲಿ ಪರೀಕ್ಷೆ 2 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನೀವು ನ್ಯೂ ಯೂಸರ್ ಆಗಿದ್ದಲ್ಲಿ ನಿಮ್ಮ ಹೆಸರು,ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

 

ಸ್ಟೆಪ್ 5: ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ

ಸ್ಟೆಪ್ 6: ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಮುದ್ರಿತ ಮೂಲ ಪ್ರತಿಯನ್ನು ಪಡೆದುಕೊಂಡು ಸಂರಕ್ಷಿಸಿ ಇಟ್ಟುಕೊಳ್ಳತಕ್ಕದ್ದು

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಮಾಡಲಾಗಿರುವ ಅವಧಿ ವಿಸ್ತರಣೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಮುನ್ನ ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Government of karnataka recruitment for 10,611 Graduate primary school teachers application date extended to 25th april 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more