Karnataka Teacher Result 2022 : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಂಕಗಳು ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022ರ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ವೈಯಕ್ತಿಕ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ. ಮೇ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ವೈಯಕ್ತಿಕ ಅಂಕಗಳು ರಿಲೀಸ್

ಮೇ 21,2022 ಮತ್ತು ಮೇ 22,2022ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1, ಪತ್ರಿಕೆ-2 ಮತ್ತು ಪತ್ರಿಕೆ-3ರ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ನಿಯಮಗಳ ಉಲ್ಲಂಘನೆ ಮಾಡಿರುವ ಹಾಗೂ ಇನ್ನಿತರ ಕಾರಣಗಳಿಂದ ಒಟ್ಟು 61 ಅಭ್ಯರ್ಥಿಗಳ ಫಲಿತಾಂಶಗಳನ್ನು ತಡೆಯಿಡಿದಿದ್ದು, ಇಬ್ಬರು ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಗಿದೆ. ಒಟ್ಟು 63 ಅಭ್ಯಥಿಗಳ ಪಟ್ಟಿಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ಮತ್ತು ಮೀಸಲಾತಿ ವಿವರಗಳನ್ನು ಹೊರತುಪಡಿಸಿ, ಆನ್‌ಲೈನ್ ಅರ್ಜಿಯಲ್ಲಿ ಭರ್ತಿ ಮಾಡಿದ ವೈಯಕ್ತಿಕ ವಿವರಗಳಾದ ಅಭ್ಯರ್ಥಿಯ ಹೆಸರು, ಅಭ್ಯರ್ಥಿಯ ತಂದೆ ಮತ್ತು ತಾಯಿಯ ಹೆಸರು, ಜನ್ಮ ದಿನಾಂಕ, ಪದವಿ, ಬಿ.ಇಡಿ/ಡಿ.ಎಲ್‌.ಇಡಿ ಮತ್ತು ಸಿಟಿಇಟಿ/ಟಿಇಟಿ ಅಂಕಗಳಿಗೆ ಸಂಬಂಧಿಸಿದಂತೆ ಮಾತ್ರ ತಿದ್ದುಪಡಿಗೆ ಆಗಸ್ಟ್ 18,2022 ರಿಂದ ಆಗಸ್ಟ್ 24,2022 ಅವಕಾಶ ಕಲ್ಪಿಸಿದೆ. ಮಾಹಿತಿ ತಿದ್ದುಪಡಿಗೆ ಅಗತ್ಯವಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಮನವಿಯನ್ನು ಅಗತ್ಯ ದೃಢೀಕೃತ ಪ್ರಮಾಣ ಪತ್ರದೊಂದಿಗೆ, ವಿಶೇಷಾಧಿಕಾರಿ, ಕೇಂದ್ರೀಕೃತ ದಾಖಲಾತಿ ಘಟಕ, ಕೆ.ಜಿ ರಸ್ತೆ ಬೆಂಗಳೂರು ಇವರಿಗೆ ಖುದ್ದಾಗಿ ಸಲ್ಲಿಸಬಹುದು. ಅಂಚೆ ಅಥವಾ ಇನ್ನಿತರೆ ಯಾವುದೇ ವಿಧಾನದಲ್ಲಿ ಸಲ್ಲಿಸಲಾಗುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಆಗಸ್ಟ್ 24,2022ರ ನಂತರ ಬಂದ ಯಾವುದೇ ಮನವಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ, ಪದವಿ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣ ಕೋರ್ಸ್ ನಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿ ವೈಯ್ಟೇಟ್ ಉಪಯೋಗಿಸಿ, ಶೇಕಡಾವಾರು ಲೆಕ್ಕ ಹಾಕಿ ಅದರ ಆಧಾರದ ಮೇಲೆ ಪ್ರತ್ಯೇಕವಾಗಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.ಮೇ 21, 22ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://schooleducation.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಅಂಕಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3 : ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್‌ 4 : ಫಲಿತಾಂಶ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5 : ಫಲಿತಾಂಶ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka school education department released marks for graduate primary school teacher result.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X