ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಟಿಇಟಿ 2019 ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಪಡೆಯಬಹುದು.
ಈ ಹಿಂದೆ ಇಲಾಖೆಯು ಬಿಡುಗಡೆ ಮಾಡಿದ ಪ್ರವೇಶ ಪತ್ರ ಊರ್ಜಿತವಾಗಿರುವುದಿಲ್ಲ ಆದ್ದರಿಂದ ಸೆಪ್ಟೆಂಬರ್ 25,2020 ರಿಂದ ಇಲಾಖೆಯ ವೆಬ್‌ಸೈಟ್ ನಲ್ಲಿ ಲಭ್ಯವಾಗುವ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019, ಅಕ್ಟೋಬರ್ 4,2020ರಂದು ನಡೆಯಲಿದೆ. ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ.
ಕರ್ನಾಟಕ ಟಿಇಟಿ 2019:
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಫೆಬ್ರವರಿ 25,2020ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹಿಂದೆ ಮಾರ್ಚ್ 7,2020ರಂದು ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು ಆದರೆ ಕೊರೋನಾ ಕಾರಣದಿಂದಾಗಿ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 4,2020ರಂದು ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Log in to generate the admission ticket for karnataka teachers eligibility test-2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ ಜೊತೆಗೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದು.
ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಸೂಚನೆಯನ್ನು ಓದಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.