ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಟಿಇಟಿ 2021ರ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ 2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಕೆಎಆರ್‌ಟಿಇಟಿ-2021) ಆಗಸ್ಟ್ 22,2021ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಯಿತು. ಅರ್ಹತಾ ಪರೀಕ್ಷೆ ಪತ್ರಿಕೆ-I ಮತ್ತು ಪತ್ರಿಕೆ- 2 ಅನ್ನು ನಡೆಸಲಾಯಿತು.
2021ನೇ ಸಾಲಿನ ಕರ್ನಾಟಕ ಟಿಇಟಿ ಪರೀಕ್ಷೆಯ ಪತ್ರಿಕೆ-1ಕ್ಕೆ 93,176, ಪತ್ರಿಕೆ-2ಕ್ಕೆ 1,38,710 ಅಭ್ಯರ್ಥಿಗಳು ಸೇರಿದಂತೆ ಒಟ್ಟು 2,31,886 ಅಭ್ಯರ್ಥಿಗಳು ಹಾಜರಾಗಿರುತ್ತಾರೆ. ಶಿಕ್ಷಕರ ಅರ್ಹತಾ ಪರೀಕ್ಷೆ ಭಾಷೆ-1 ಮತ್ತು ಭಾಷೆ-2ರಲ್ಲಿ ಎಂಟು ಭಾಷೆಗಳನ್ನು ಹಾಗೂ ಐಚ್ಚಿಕ ವಿಷಯದ ಪತ್ರಿಕೆಗಳು ಏಳು ಭಾಷಾ ಮಾಧ್ಯಮಗಳನ್ನು ಒಳಗೊಂಡಿತ್ತು.
2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ-ಉತ್ತರಗಳನ್ನು ಆಗಸ್ಟ್ 24,2021 ಪ್ರಕಟಗೊಳಿಸಲಾಗಿತ್ತು. ಅಲ್ಲದೇ ಆನ್‌ಲೈನ್ ಮೂಲಕ ಆಗಸ್ಟ್ 31,2021ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೇಂದ್ರೀಕೃತ ದಾಖಲಾತಿ ಘಟಕದಲ್ಲಿ ಒಟ್ಟು 4201 ಆಕ್ಷೇಪಣೆಗಳನ್ನು ಸ್ವೀಕರಿಸಿ, ಪರಿಶೀಲಿಸಲಾಗಿದೆ. ನಂತರ ಅಂತಿಮ ಕೀ-ಉತ್ತರಗಳನ್ನು ಸೆಪ್ಟೆಂಬರ್ 8,2021ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷಾ ಫಲಿತಾಂಶವನ್ನು ಬಿಡಗುಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದ ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಕರ್ನಾಟಕ ಟಿಇಟಿ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://schooleducation.kar.nic.in/ ಗೆ ಭೇಟಿ ನೀಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "KARTET 2021- Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











