NEP In Karnataka- ಹೊಸ ರಾಷ್ಡ್ರೀಯ ಶಿಕ್ಷಣ ನೀತಿ ಅಳವಡಿಕೆಯಲ್ಲಿ ಕರ್ನಾಟವೇ ಮೊದಲು: ಡಿಸಿಎಂ ಹೇಳಿಕೆ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ)ಯನ್ನು ಜಾರಿಗೊಳಿಸುವಲ್ಲಿ ಅಗತ್ಯ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಇಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಯಲ್ಲಿ ಕರ್ನಾಟಕವೇ ಮೊದಲು: ಡಿಸಿಎಂ

ಇಂದು ಬೆಂಗಳೂರು ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ ಕುರಿತ ಐದು ದಿನಗಳ ಆನ್ ಲೈನ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅಶ್ವತ್ಥನಾರಾಯಣ ಅವರು, ನಿರ್ದಿಷ್ಟ ಗುರಿ ಮತ್ತು ಸ್ಪಷ್ಟ ಕಾರ್ಯಸೂಚಿಯ ಮೂಲಕ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಡೀ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಜಾರಿಗೊಳಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಜ್ಯ ಸರ್ಕಾರ ಮೊದಲನಿಂದಲೂ ಉತ್ಸುಕತೆ ಹೊಂದಿದೆ. ಹೊಸ ಶಿಕ್ಷಣ ನೀತಿಯ ಪ್ರತಿ ಕೈಸೇರುತ್ತಿದ್ದಂತೆ, ಅದನ್ನು ಜಾರಿಗೊಳಿಸುವುದಕ್ಕಾಗಿ ಉನ್ನತಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲಾಯಿತು ಎಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಟವಾಗುವುದಕ್ಕು ಮುನ್ನ ಮತ್ತು ಪ್ರಕಟವಾದ ನಂತರ ಕಾರ್ಯಪಡೆ ಜೊತೆ ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.

For Quick Alerts
ALLOW NOTIFICATIONS  
For Daily Alerts

English summary
Karnataka to be the first state to implement national education policy said by DCM.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X