SSLC PUC Class To Start From Jan 1 : ಜನವರಿ 1 ರಿಂದ 10 ಮತ್ತು 12ನೇ ತರಗತಿಗಳು ಆರಂಭ

ಜನವರಿ 1 ರಿಂದ ಶಾಲೆ ಕಾಲೇಜು ಆರಂಭ

ಕರ್ನಾಟಕ ರಾಜ್ಯ ಸರ್ಕಾರ 2021ರ ಜನವರಿ 1 ರಿಂದ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ. 6 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಕೊರೋನಾ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸದಿರುವ ಹಿನ್ನೆಲೆಯಲ್ಲಿ ಜನವರಿ 1 ರಿಂದ 10 ಮತ್ತು 12ನೇ ತರಗತಿಗಳನ್ನು ಪ್ರಾರಂಭಿಸಲು ನಿರ್ಧಾರ ಕೈಗೊಂಡಿದೆ ಹಾಗೂ ಶಾಲೆ ಮತ್ತು ಕಾಲೇಜು ಆರಂಭದ ಕುರಿತು ಕೆಲವು ಪ್ರಮುಖಾಂಶಗಳನ್ನು ಬಿಡುಗಡೆ ಮಾಡಲಾಗಿದೆ.

ಬಿಎಸ್ ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಉಮಾಶಂಕರ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತಂತೆ ಇಂದು ನಡೆದ ಸಭೆಯ ಪ್ರಮುಖಾಂಶಗಳು:

* 2021ರ ಜನವರಿ 1 ರಿಂದ ರಾಜ್ಯದಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭವಾಗಲಿವೆ.
* 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
* ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
* ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿರುತ್ತದೆ.
* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣ ಇಲ್ಲದ ಕುರಿತು ದೃಢೀಕರಣ ಪಡಿಸಿಕೊಳ್ಳಬೇಕು.
* ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್ 19ರ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿಯನ್ನು ಸಲ್ಲಿಸಬೇಕು.
* ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಲ್ಲ: ಮನೆಯಲ್ಲಿಯೇ ಇದ್ದು ಆನ್‌ಲೈನ್ ಯೂಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು.
* ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು.
* ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ; ಒಂದು ಕೊಠಡಿಯಲ್ಲಿ ಗರಿಷ್ಟ 15 ವಿದ್ಯಾರ್ಥಿಗಳು.

ಬಿಸಿಯೂಟ ವಿತರಣೆ ಇಲ್ಲ:

* ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳ ಪಾಲನೆ ಕಡ್ಡಾಯ
* ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಭಾರಿ ಶಾಲೆಗೆ ಹಾಜರಾಗಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka To Reopen Schools, PU Colleges For Classes 10, 12 Students From January 1, 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X