Online Education For Even Semesters: ಪದವಿಗೆ ಆನ್‌ಲೈನ್ ಶಿಕ್ಷಣ ಮುಂದುವರೆಸುವಂತೆ ಸಚಿವರ ಸೂಚನೆ

ಪದವಿ ಕೋರ್ಸ್ ಗಳಿಗೆ ಆನ್‌ಲೈನ್ ತರಗತಿ ಮುಂದುವರೆಸುವಂತೆ ಸಚಿವರ ಸೂಚನೆ

ಕರ್ನಾಟಕ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳ ಪದವಿ ಕೋರ್ಸ್‌ಗಳ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲು ಸೂಚನೆ ನೀಡುವವರೆಗೂ ಆನ್‌ಲೈನ್ ತರಗತಿ ಮುಂದುವರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

 

"ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ (1, 3, 5) ಪರೀಕ್ಷೆ ನಡೆಸದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿ ಮುಂದುವರೆಸಬೇಕು. ಬಹುತೇಕ ಕೋರ್ಸ್‌ಗಳಿಗೆ ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದರಿಂದ ಪದವಿ ಕೋರ್ಸ್‌ಗಳ ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಂತರ ನಡೆಸಲಾಗುತ್ತದೆ' ಎಂದು ಹೇಳಿದ್ದಾರೆ. ಪ್ರಸ್ತುತ ಯಾವುದೇ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪ್ರಮೋಟ್ ಮಾಡಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೆಲವು ಇಂಜಿನಿಯರ್ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಮಾತ್ರ ಮುಂದಿನ ಸೆಮಿಸ್ಟರ್‌ಗಳಿಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜತೆಗೆ ಸಮಾಲೋಚನೆ ನಡೆಸಿ ತೀರ್ಮಾನಕ್ಕೆ ಬರಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ ಪ್ರಕ್ರಿಯೆ ತಡವಾಗಿದೆ. ಆದರೆ ಹೆಚ್ಚಿನ ವಿವಿಗಳಲ್ಲಿ ಈಗಾಗಲೇ 3ನೇ ಸೆಮಿಸ್ಟರ್‌ ತರಗತಿಗಳು ಮುಗಿದಿದ್ದು, ಕೆಲವೆಡೆ ಪರೀಕ್ಷೆಗಳು ಕೂಡ ಆರಂಭವಾಗಿದ್ದವು. ಇನ್ನು ಕೆಲವೆಡೆ ಪರೀಕ್ಷೆಗಳನ್ನು ನಡೆಸುವುದು ಮಾತ್ರ ಬಾಕಿ ಉಳಿದಿದ್ದರೆ ಅಲ್ಲಿ ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ಕ್ಲಾಸ್ ಪ್ರಾರಂಭಿಸಬೇಕು. ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಬಾಕಿ ಉಳಿಯುವ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ನಡೆಸುವುದು ಒಳಿತು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karantaka universities and colleges to continue online classes for even semester students said by minister CN ashwath narayan.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X