ಸಾರ್ವಜನಿಕ ಶಿಕ್ಷಣ ಇಲಾಖೆಯು ವಿದ್ಯಾಗಮ ಯೋಜನೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಕೊರೋನಾ ವೈರಸ್ ಭೀತಿಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾಗಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿತ್ತು.
ಇದೀಗ ಜನವರಿ 1 ರಿಂದ ಶಾಲೆ ಮತ್ತು ಕಾಲೇಜುಗಳು ಪುನರಾರಂಭವಾಗಲಿವೆ. ವಿದ್ಯಾಗಮ ಯೋಜನೆಯು 1 ರಿಂದ 6ನೇ ತರಗತಿ, 6 ರಿಂದ 9ನೇ ತರಗತಿ ವರೆಗಿನ ತರಗತಿಗಳು ಕೂಡ ಕೆಲವು ಬದಲಾವಣೆಗಳೊಂದಿಗೆ ಪುನರಾರಂಭವಾಗುತ್ತಿದೆ. ವಿದ್ಯಾಗಮ ತರಗತಿಗಳಿಗೆ ಹಾಜರಾಗುವ ಮಕ್ಕಳು ಪೋಷಕರ ಅನುಮತಿ ಪತ್ರವನ್ನು ತರಬೇಕಿರುತ್ತೆ. ಹಾಗೆಯೇ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.
ಪ್ರತಿ ತರಗತಿಗಳನ್ನು ವಿದ್ಯಾರ್ಥಿಗಳು ಮತ್ತು ಲಭ್ಯವಿರುವ ಶಿಕ್ಷಕರ ಸಂಖ್ಯೆಗನುಗುಣವಾಗಿ ವಿಭಾಗ ಮಾಡಿ ನಡೆಸಲಾಗುತ್ತದೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ತರಗತಿಗಳನ್ನು ನಡೆಸಲಾಗುತ್ತದೆ. 8ನೇ ತರಗತಿ ವಿದ್ಯಾರ್ಥಿಗಳಿಗೆ ಮಂಗಳವಾರ, ಗುರುವಾರ ತರಗತಿಗಳನ್ನು ನಡೆಸಲಾಗುತ್ತದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಪಡಿಸಿದ ವಿದ್ಯಾಗಮ ವೇಳಾಪಟ್ಟಿ ಇಲ್ಲಿದೆ. pic.twitter.com/dwZsITiAMk
— DIPR Karnataka (@KarnatakaVarthe) December 24, 2020
ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ರಿಂದ ತರಗತಿಗಳನ್ನು ನಡೆಸಲಾಗುತ್ತದೆ. ಒಟ್ಟು ಎಂಟು ತಂಡಗಳಾಗಿ ವಿದ್ಯಾರ್ಥಿಗಳನ್ನು ವಿಂಗಡಿಸಿ ಮಧ್ಯಾಹ್ನ 2 ರಿಂದ 2:45, 2:45ರಿಂದ 3:30 ಮತ್ತು 3:45 ರಿಂದ 4:30ರ ವರೆಗೆ ತರಗತಿಗಳು ನಡೆಯಲಿವೆ.
ಪ್ರಾಥಮಿಕ ಶಾಲೆಯಲ್ಲಿ 6 ರಿಂದ 8ನೇ ತರಗತಿ ವರೆಗಗಿನ ಮಕ್ಕಳ ಸಂಖ್ಯೆಗನುಗುಣವಾಗಿ ಏಳು ತಂಡಗಳನ್ನಾಗಿ ವಿಂಗಡಿಸಲಾಗುತ್ತದೆ. 6ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರ ಮತ್ತು ಗುರುವಾರ, 7ನೇ ತರಗತಿ ವಿದ್ಯಾರ್ಥಿಗಳಿಗೆ ಮಂಗಳವಾರ ಮತ್ತು ಶುಕ್ರವಾರ ತರಗತಿಗಳು ನಡೆಯುತ್ತವೆ. 8ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 10 ರಿಂದ 12:30ರ ವರೆಗೆ ಮೂರು ಅವಧಿಗಳಲ್ಲಿ ತರಗತಿಗಳು ನಡೆಯಲಿವೆ.
6 ಮತ್ತು 7ನೇ ತರಗತಿಗಳು 6 ಮತ್ತು 7ನೇ ತರಗತಿ ಮಾತ್ರ ಇರುವ ಪ್ರಾಥಮಿಕ ಶಾಲೆಗಳಿಗೆ ಪ್ರತ್ಯೇಕ ವಿದ್ಯಾಗಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 6ನೇ ತರಗತಿ ಮಕ್ಕಳಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ತರಗತಿಗಳು ನಡೆಯಲಿವೆ. 7 ನೇ ತರಗತಿ ಮಕ್ಕಳಿಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ತರಗತಿಗಳು ನಡೆಯಲಿವೆ.