ಕರ್ನಾಟಕ ಯಕ್ಷಗಾನ ಅಕಾಡೆಮಿ ಫೆಲೋಶಿಪ್ ಗೆ ಅರ್ಜಿ ಅಹ್ವಾನ

5 ತಿಂಗಳ ಕಾಲ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸುವವರಿಗೆ ಫೆಲೋಶಿಪ್ ನೀಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಯಕ್ಷಗಾನ ಕ್ಷೇತ್ರದಲ್ಲಿ ಫೆಲೋಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

5 ತಿಂಗಳ ಕಾಲ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸುವವರಿಗೆ ಫೆಲೋಶಿಪ್ ನೀಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯಕ್ಷಗಾನ ಫೆಲೋಶಿಪ್ ಗೆ ಅರ್ಜಿ ಅಹ್ವಾನ

ಫೆಲೋಶಿಪ್ ವಿವರ

ಒಬ್ಬ ಅಭ್ಯರ್ಥಿಗೆ 90 ಸಾವಿರ ರೂ. ಹಾಗೂ ಮಾರ್ಗದರ್ಶಕರ ಗೌರವ ಸಂಭಾವನೆ 10 ಸಾವಿರ ರೂ. ನಿಗದಿಪಡಿಸಲಾಗಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ, 45 ವರ್ಷನ ಮೀರಿರದವರು ಅರ್ಜಿ ಸಲ್ಲಿಸಬಹುದು. ಯಕ್ಷಗಾನದ ನಾನಾ ಪ್ರಕಾರಗಳು ಅಧ್ಯಯನಕ್ಕೆ ಸೇರಿವೆ.

ಕನ್ನಡ ಭಾಷಾ ವಿಜ್ಞಾನ, ಜಾನಪದ, ಸಮಾಜ ವಿಜ್ಞಾನ ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ, ಇಂಗ್ಲಿಷ್, ಹಿಂದಿ ಇತ್ಯಾದಿ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು.

ಶಾದಿ ಶಗುನ್: ಮುಸ್ಲಿಂ ಮಹಿಳಾ ಪದವೀಧರರಿಗೆ 51000 ರೂ. ನಗದು ಬಹುಮಾನಶಾದಿ ಶಗುನ್: ಮುಸ್ಲಿಂ ಮಹಿಳಾ ಪದವೀಧರರಿಗೆ 51000 ರೂ. ನಗದು ಬಹುಮಾನ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಅರ್ಜಿಯನ್ನು ಅಕ್ಟೋಬರ್ 31 ರೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ

ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-2
ಇವರಿಗೆ ಅಂಚೆ ಮೂಲಕ ಅಥವಾ ಇ-ಮೇಲ್ ನಲ್ಲಿ ಅರ್ಜಿ ಕಳುಹಿಸಬಹುದು.

ಯಕ್ಷಗಾನ

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಸಾಂಸ್ಕೃತಿಕ ಕಲೆಯಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka yakshagana academy invites applications from eligible candidates for fellowship under girijana upayojane program.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X