ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಕ್ಟೋಬರ್ 4,2020 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಮನವಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ.
ಕೊರೊನಾ ಕಾರಣದಿಂದಾಗಿ ತಮ್ಮ ಮೂಲ ಜಿಲ್ಲೆಗಳಿಗೆ ಹಿಂತಿರಿಗಿರುವ ವಲಸಿಗರು, ಕೆಲವು ಗರ್ಭಿಣಿ ಸ್ತ್ರೀಯರು ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಕೆಲವು ಅಭ್ಯರ್ಥಿಗಳು ಈಗಾಗಲೇ ಪರೀಕ್ಷಾ ಕೇಂದ್ರಗಳ ಬದಲಾವಣೆಗಾಗಿ ಮನವಿ ಸಲ್ಲಿಸಿರುತ್ತಾರೆ. ಇಂತಹ ಕಾರಣಗಳನ್ನು ಮಾತ್ರವೇ ಸೀಮಿತಗೊಳಿಸಿ, ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಅವಕಾಶ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳ ಬದಲಾವಣೆ ಕೋರುವ ಅಭ್ಯರ್ಥಿಗಳು ದಿನಾಂಕ ಅಕ್ಟೋಬರ್ 2,2020ರ ರಾತ್ರಿ 12-00 ಗಂಟೆಯೊಳಗೆ ಮಾತ್ರವೇ ತಮ್ಮ ಮನವಿಯನ್ನು cackaranataka@gmail.com ಗೆ ಸಲ್ಲಿಸಬಹುದು. ನಂತರ ಬರುವ ಮನವಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.