KARTET Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಟಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪರೀಕ್ಷೆಯನ್ನು ನವೆಂಬರ್ 6,2022ರ ಭಾನುವಾರದಂದು ರಾಜ್ಯದಾದ್ಯಂತ ಎರಡು ಅಧಿವೇಶನಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿ ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ.

ಕರ್ನಾಟಕ ಟಿಇಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://www.schooleducation.kar.nic.in/index.html ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "KARTET 2022 generate admission ticket for karnataka teachers eligibility test-2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ ಜೊತೆಗೆ ಅಗತ್ಯ ದಾಖಲೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದು.

KARTET 2022 ಪ್ರವೇಶ ಪತ್ರ ಡೌನ್‌ಲೋಡ್ : ಮುಂದೇನು ?

ಆಕಾಂಕ್ಷಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ವೈಯಕ್ತಿಕ ವಿವರಗಳನ್ನು ಒಳಗೊಂಡಂತೆ ಕರ್ನಾಟಕ ಟಿಇಟಿ ಪ್ರವೇಶ ಪತ್ರ 2022 ರಲ್ಲಿ ಉಲ್ಲೇಖಿಸಿರುವ ಎಲ್ಲಾ ವಿವರಗಳನ್ನು ಪರೀಕ್ಷಿಸಲು ಸೂಚಿಸಲಾಗಿದೆ. ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ತಡ ಮಾಡದೇ ಇಲಾಖೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಅಭ್ಯರ್ಥಿಗಳು KARTET ಪ್ರವೇಶ ಪತ್ರ 2022 ರ ಪ್ರಿಂಟ್ ಔಟ್ ತೆಗೆದುಕೊಂಡು ಅದನ್ನು ಪರೀಕ್ಷಾ ಸ್ಥಳಕ್ಕೆ ಕೊಂಡೊಯ್ಯಬೇಕು. ಜೊತೆಗೆ ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಒಳಗೊಂಡಿರುವ ಎಲ್ಲಾ ಪರೀಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಪರೀಕ್ಷೆ ಬರೆಯುವವರು ಫೇಸ್ ಮಾಸ್ಕ್ ಧರಿಸಬೇಕು ಮತ್ತು ಪರೀಕ್ಷೆಯ ಉದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಪ್ರವೇಶ ಪತ್ರ ಬಿಡುಗಡೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Department of public instruction released KARTET admit card 2022 in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+