ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) 2020ಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ. ಜುಲೈ 12ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗಾಗಿ ಮತ್ತೊಮ್ಮೆ ಅವಕಾಶ ನೀಡಿದೆ.

ಇಲಾಖೆಯು ಈ ಮುಂಚೆ ಮೇ 28ರೊಳಗೆ ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಆದರೆ ಇದೀಗ ಜೂನ್ ೧೧ರವರೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಅವಕಾಶ ಬಳಸಿಕೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/index.html ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 11ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಈ ಮುಂಚೆ ಏಪ್ರಿಲ್ 11,2020ರಂದು ಕರ್ನಾಟಕ ಟಿಇಟಿ ಪರೀಕ್ಷಾ ದಿನಾಂಕವು ನಿಗದಿಯಾಗಿತ್ತು ಆದರೆ ದೇಶಾದ್ಯಂತ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿದ್ದರಿಂದಾಗಿ ಮುಂದೂಡಲ್ಪಟ್ಟಿತ್ತು. ಕೊನೆಗೆ ಜುಲೈ 12 ರಂದು ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











