KCET 2021 Admit Card: ಸಿಇಟಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2021ರ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಿಇಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕೊರೋನಾ ಆತಂಕದ ನಡುವೆಯೂ ಆಗಸ್ಟ್ 28, 29 ಮತ್ತು 31,2021ರಂದು ಸುಮಾರು 500 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅದರಲ್ಲಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಗೂ 98 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಈ ಭಾರಿ ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರ್ಯಾಂಕ್ ಕೊಡಲಾಗುವುದು. ಅದರ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯನ್ನು ಮಾಡಲಾಗುವುದು.

ಸಿಇಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿದೆ ಸ್ಟೆಪ್ಸ್:

ಸ್ಟೆಪ್ 1: ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು 'ಸಿಇಟಿ 2021' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ 'CET 2021 Download Hall Ticket' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಂತರ ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್​ಲೋಡ್ ಮಾಡಿಕೊಂಡ ಬಳಿಕ ಅದರಲ್ಲಿರುವ ಮಾಹಿತಿಗಳೆಲ್ಲವೂ ಸರಿಯಾಗಿದೆಯೇ ಎಂಬುದನ್ನು ಅಭ್ಯರ್ಥಿಗಳು ಪರಿಶೀಲನೆ ಮಾಡಿಕೊಳ್ಳಿ. ಪರೀಕ್ಷೆಗೆ ಹೋಗುವಾಗ ಪ್ರವೇಶ ಪತ್ರವನ್ನು ಕೊಂಡೊಯ್ಯುವುದು ಕಡ್ಡಾಯವಾಗಿದೆ. ಜೊತೆಗೆ ಐಡಿ ಕಾರ್ಡ್ ತೆಗೆದುಕೊಂಡುಹೋಗುವುದು ಒಳಿತು.

More News  

For Quick Alerts
ALLOW NOTIFICATIONS  
For Daily Alerts

English summary
KCET 2021 admit card released. How to download admit card here is the steps.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+