
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು, ಸಿಟಿಇ ಪರೀಕ್ಷೆ ಬಗ್ಗೆ ಹಲವಾರು ಗೊಂದಲು ಉಂಟಾಗಿದ್ದವು. ಆದರೆ ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ರಿಲೀಫ್ ನೀಡಿದೆ. ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಗೆ ಪಿಯುಸಿ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಮತ್ತು ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರಾದ ಸಿಡಿಎಂ ಡಾ.ಅಶ್ವತ್ಥ್ ನಾರಾಯಣ ಘೋಷಿಸಿದ್ದಾರೆ.
ವೃತ್ತಿಪರ ಕೋರ್ಸ್ ಗಳಿಗೆ ದ್ವಿತೀಯ ಪಿಯುಸಿ ಶೇ.50ರಷ್ಟು ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಸಿಇಟಿ ಪರೀಕ್ಷೆಯ ಅಂಕಗಳ ಆಧಾರದ ಸೀಟು ಹಂಚಿಕೆಯನ್ನು ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಆಗಸ್ಟ್ 28 ಮತ್ತು 29 ರಂದು ಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಜೂನ್ 15 ರಿಂದ ಆನ್‌ಲೈನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಲಹೆ ನೀಡಿದ್ದರು. ಇದೀಗ ಸರ್ಕಾರವು ಅವರ ಸಲಹೆಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಂಡಿದೆ.


Click it and Unblock the Notifications











