KCET 2021 Round 1 Seat Allotment : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಯುಜಿಸಿಇಟಿ 2021ರ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಿದೆ. ಆಗಸ್ಟ್ 28 ಮತ್ತು 29, 2021 ರಂದು ನಡೆದ ಸಿಇಟಿ 2021ರ ಮೊದಲ ಸುತ್ತಿನ ಕೌನ್ಸೆಲಿಂಗ್ ಅಧಿವೇಶನಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಸೀಟು ಹಂಚಿಕೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡಿ ವೀಕ್ಷಿಸಬಹುದು.

ಕೆಸಿಇಟಿ 2021 ಮೊದಲ ಸುತ್ತಿನ ಸೀಟು ಹಂಚಿಕ ಫಲಿತಾಂಶ ಪ್ರಕಟ

ಅಲ್ಲದೆಯೇ ವಿವಿಧ ಕಾಲೇಜುಗಳಲ್ಲಿ ಇಂಜಿನಿಯರಿಂಗ್, ಫಾರ್ಮಸಿ, ಆರ್ಕಿಟೆಕ್ಚರ್ ಮತ್ತು ಫಾರ್ಮ್ ಸೈನ್ಸಸ್ ಇತ್ಯಾದಿ ಕೋರ್ಸ್‌ಗಳಿಗೆ ಕಟ್ ಆಫ್ 2021 ಅಂಕಗಳನ್ನು ಕೂಡ ಕೆಸಿಇಟಿ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಕಟ್‌ ಆಫ್ ಅಂಕಗಳ ಜೊತೆಗೆ ತಮ್ಮ ಸೀಟು ಹಂಚಿಕೆ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿಯ ಪ್ರಕಾರ ಅಭ್ಯರ್ಥಿಗಳು ಮೊದಲ ಸುತ್ತಿನ ಸೀಟು ಹಂಚಿಕೆಯ ಆಯ್ಕೆಯನ್ನು ನಿಗದಿಪಡಿಸಲು ನವೆಂಬರ್ 30, 2021 ರವರೆಗೆ ಅವಕಾಶ ನೀಡಲಾಗಿದೆ. ಜೊತೆಗೆ ನಿಗದಿತ ಶುಲ್ಕವನ್ನು ಪಾವತಿಸಲು ಮತ್ತು ಪ್ರವೇಶಾತಿ ಪತ್ರವನ್ನು ಪಡೆಯಲು ನವೆಂಬರ್ 29 ರಿಂದ ಡಿಸೆಂಬರ್ 1,2021 ರವರೆಗೆ ಕಾಲಾವಕಾಶವಿರುತ್ತದೆ. ಅದಾಗ್ಯೂ ಗೊತ್ತುಪಡಿಸಿದ ಕಾಲೇಜಿಗೆ ವರದಿ ಮಾಡಲು ಡಿಸೆಂಬರ್ 3,2021 ಕೊನೆಯ ದಿನವಾಗಿದೆ.

ಕೆಸಿಇಟಿ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ನವೆಂಬರ್ 8, 2021 ರಂದು ಪ್ರಕಟ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ತಮ್ಮ ಆಯ್ಕೆಯನ್ನು ಬದಲಾಯಿಸಿಕೊಳ್ಳಲು ಮತ್ತು ಮಾರ್ಪಡಿಸಲು ನವೆಂಬರ್ 20, 2021ರ ವರೆಗೆ ಅವಕಾಶ ನೀಡಲಾಗಿತ್ತು.

ಆಗಸ್ಟ್ 28 ಮತ್ತು 29, 2021 ರಂದು ನಡೆದ ಕೆಸಿಇಟಿ 2021 ಪರೀಕ್ಷೆಗೆ ಸುಮಾರು 2 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇದೀಗ ಅಭ್ಯರ್ಥಿಗಳು ಸೀಟು ಹಂಚಿಕೆ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನ್ನು ಅನುಸರಿಸಿ.

ಕೆಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಸೀಟು ಹಂಚಿಕೆ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಸಿಇಟಿ ಸಂಖ್ಯೆ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
KEA released KCET 2021 first round seat allotment result in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+