ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2022 ಅರ್ಜಿ ತಿದ್ದುಪಡಿ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು ಮುಕ್ತಾಯಗೊಳಿಸಲಿದೆ. ಸಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಏನಾದರು ತಪ್ಪು ಮಾಹಿತಿಯನ್ನು ಭರ್ತಿ ಮಾಡಿದ್ದಲ್ಲಿ ತಿದ್ದುಪಡಿ ಮಾಡಲು ಇಂದು ರಾತ್ರಿ 11:59ರ ವರೆಗೆ ಅವಕಾಶ ನೀಡಲಾಗಿರುತ್ತದೆ.

KCET 2022 ಅರ್ಜಿ ತಿದ್ದುಪಡಿ ಮಾಡುವುದು ಹೇಗೆ ? :
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in. ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ "ಕರ್ನಾಟಕ CET ಅರ್ಜಿ ತಿದ್ದುಪಡಿ" ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3: ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ತಪ್ಪಾದ ಮಾಹಿತಿಯನ್ನು ತಿದ್ದುಪಡಿ ಮಾಡಿ
ಸ್ಟೆಪ್ 5: ಅಂತಿಮವಾಗಿ ಸಬ್‌ಮಿಟ್ ಮಾಡಿ
ಸ್ಟೆಪ್ 6: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ. ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಿಗದಿಪಡಿಸಲಾಗಿದೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.


Click it and Unblock the Notifications











