ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2022ರ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ಸಿಇಟಿ ಪರೀಕ್ಷೆಯನ್ನು ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತ ವೆಬ್ಸೈಟ್ -- kea.kar.nic.in ಗೆ ಭೇಟಿ ನೀಡುವ ಮೂಲಕ ಕೀ ಉತ್ತರಗಳನ್ನು ನೋಡಬಹುದು. KCET 2022ಗೆ ಹಾಜರಾದ ಅರ್ಜಿದಾರರು ಜೀವಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದ ತಾತ್ಕಾಲಿಕ ಉತ್ತರ ಕೀಗಳನ್ನು ಡೌನ್ಲೋಡ್ ಮಾಡಬಹುದು ಮತ್ತು ಉತ್ತರಗಳನ್ನು ಹೊಂದಾಣಿಕೆ ಮಾಡಿಕೊಳ್ಳಬಹುದು.
ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ. ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಡೆಸಲಾಗಿತ್ತು. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗಳು ನಡೆದಿವೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ. ಕೆಸಿಇಟಿ ಪೆನ್ ಮತ್ತು ಪೇಪರ್ ಆಧಾರಿತ ಪರೀಕ್ಷೆಯಾಗಿದೆ. ಈ ಪ್ರವೇಶ ಪರೀಕ್ಷೆಯನ್ನು ಪೆನ್ ಮತ್ತು ಪೇಪರ್ ಮೋಡ್ನಲ್ಲಿ ನಡೆಸಲಾಯಿತು.

KCET ಕೀ ಉತ್ತರ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1 : ಅಧಿಕೃತ ವೆಬ್ಸೈಟ್ kea.kar.nic.in ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಕೀ ಉತ್ತರ 2022 ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3 : KCET ವಿಷಯವಾರು ಉತ್ತರ ಕೀ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
ಸ್ಟೆಪ್ 4 :ಸಂಭವನೀಯ ಸ್ಕೋರ್ ಅನ್ನು ಲೆಕ್ಕಾಚಾರ ಮಾಡಲು ಪ್ರತಿಕ್ರಿಯೆಗಳೊಂದಿಗೆ ಹೊಂದಾಣಿಕೆ ಮಾಡಿ
KCET ಕೀ ಉತ್ತರದ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ಜೂನ್ 25 ರೊಳಗೆ (5:30 pm) ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಂತಿಮ ಉತ್ತರ ಕೀಲಿಯನ್ನು ಬಿಡುಗಡೆ ಮಾಡುತ್ತದೆ ಮತ್ತು ಅದರ ಫಲಿತಾಂಶಗಳನ್ನು ಘೋಷಿಸುತ್ತದೆ.