
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ರದ್ದಾಗಿದೆ ಆದರೆ ಸಿಇಟಿ ಪರೀಕ್ಷೆಯನ್ನು ನಡೆಸುತ್ತೇವೆ. ಸಿಇಟಿ ಅಂಕಗಳನ್ನು ಆಧರಿಸಿ ವೃತ್ತಿಪರ ಕೋರ್ಸ್ ಗಳಿಗೆ ಸೀಟ್ ಗಳನ್ನು ಹಂಚಿಕೆ ಮಾಡಲಾಗುತ್ತದೆ ಹಾಗಾಗಿ ಪರೀಕ್ಷೆಯನ್ನು ನಡೆಸಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.
ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಪಿಯುಸಿ ಅಂತೆಯೇ ಸಿಇಟಿ ಪರೀಕ್ಷೆಯನ್ನು ರದ್ದು ಮಾಡಬಹುದಿತ್ತು ಆದರೆ ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗುತ್ತದೆ ಹಾಗಾಗಿ ಪಿಯು ಪರೀಕ್ಷೆ ರದ್ದಾದರೂ ಕೂಡ ಸಿಇಟಿಯನ್ನು ನಡೆಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಕಾರಣದಿಂದಾಗಿ ಗ್ರೇಡ್ ಮೂಲಕ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದೇವೆ. ಒಂದು ವೇಳೆ ಈ ಫಲಿತಾಂಶದಿಂದ ವಿದ್ಯಾರ್ಥಿಗಳು ತೃಪ್ತಿಯಾಗದಿದ್ದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಹಾಗಾಗಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಅವರ ಸಲಹೆ ಸೂಕ್ತವಾಗಿದ್ದು, ಈ ಕುರಿತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.


Click it and Unblock the Notifications











