KCET Exam 2020: ಪರೀಕ್ಷಾ ವೇಳಾಪಟ್ಟಿ ರಿಲೀಸ್

ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಜುಲೈ 30 ಮತ್ತು 31,2020ರಂದು ಪರೀಕ್ಷೆ ನಡೆಯಲಿದೆ. ಇಂದು ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಸಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದರು. ಸಂಜೆ ವೇಳೆಗೆ ಪರೀಕ್ಷಾ ವೇಳಾಪಟ್ಟಿಯನ್ನು ಅವರು ಟ್ವೀಟರ್‌ನಲ್ಲಿ ಬಿಡುಗಡೆ ಮಾಡಿದ್ದಾರೆ.

 ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ಸರ್ಕಾರದ ನಿರ್ದೇಶನದ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೊದಲನೇ ವರ್ಷದ/ಮೊದಲ ಸೆಮಿಸ್ಟರ್ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್‌ ಮತ್ತು ಬಿ-ಫಾರ್ಮ್ ಮತ್ತು ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಗಳನ್ನು ನಡೆಸಲಿದೆ.

ಸಿಇಟಿ ಜುಲೈ 2020 ಪರೀಕ್ಷೆಯ ವೇಳಾಪಟ್ಟಿ:

*30/7/2020 ಗುರುವಾರ ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ (60 ಅಂಕ).
*31/7/2020 ಶುಕ್ರವಾರ ಬೆಳಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನ ಶಾಸ್ತ್ರ (60 ಅಂಕಗಳು)
* 1/8/2020 ಶನಿವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು)

ಈ ಮುಂಚೆ ಏಪ್ರಿಲ್ 22 ಮತ್ತು 23,2020ರಂದು ಸಿಇಟಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ ಮಾಡಲಾಗಿತ್ತು. ಆದರೆ ದೇಶದೆಲ್ಲೆಡೆ ಕೊರೋನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಪರೀಕ್ಷೆಯನ್ನು ಮೂಂದೂಡಲಾಗಿತ್ತು. ಆದರೆ ಇದೀಗ ಹೊಸ ವೇಳಾಪಟ್ಟಿ ಪ್ರಕಟವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
KEA released kcet exam july 2020 timetable today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+