KCET Result 2021 : ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ

2020-21ನೇ ಸಾಲಿನಲ್ಲಿ ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ ಫಾರ್ಮ್, ಫಾರ್ಮಾ ಡಿ, ವೆಟರ್ನರಿ ಕೋರ್ಸ್​ಗಳ ಪ್ರವೇಶಾತಿಗಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶ ಬಿಡುಗಡೆಯಾದ ಬಳಿಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆಗಸ್ಟ್ 28, 29, 30ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ. ಫಲಿತಾಂಶ ರಿಲೀಸ್ ಆದ ಬಳಿಕ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್​ಸೈಟ್​ನಲ್ಲಿ ರಿಸಲ್ಟ್ ವೀಕ್ಷಿಸಬಹುದು.

ಕರ್ನಾಟಕ ಸಿಇಟಿ ಫಲಿತಾಂಶ ಇಂದು ರಿಲೀಸ್

ಕರ್ನಾಟಕ ಸಿಇಟಿ ಪರೀಕ್ಷೆಗೆ ಹಾಜರಾದವರ ಸಂಖ್ಯೆ:

ಈ ವರ್ಷ ಸಿಇಟಿ ಪರೀಕ್ಷೆಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದರು. 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದರು. 1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದರು.

ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ವಿವಿಧ ಪದವಿಪೂರ್ವ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಿಇಟಿ ಅರ್ಹತೆ ಪರೀಕ್ಷೆಯ ಮೂಲಕ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಇತರ ಕೋರ್ಸ್‌ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು. ನಿಮ್ಮ ಆಸಕ್ತಿಯ ಕೋರ್ಸ್ ಗಳಿಗೆ ಸೇರಲು ದ್ಯಾರ್ಥಿಗಳು ಯುಜಿಸಿಇಟಿ ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆ 2021 ರ ಅಡಿಯಲ್ಲಿ ನಡೆಸುವ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳಿಗೆ ಹಾಜರಾಗಬೇಕಿರುತ್ತದೆ.

ಆಗಸ್ಟ್ 28,29 ಮತ್ತು 30ರಂದು ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷಾ ತಾತ್ಕಾಲಿಕ ಉತ್ತರ ಕೀಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು ಮತ್ತು ಆಕ್ಷೇಪಣೆಗಳಿದ್ದರೆ ಅದನ್ನು ಸಲ್ಲಿಸಲು ತಿಳಿಸಲಾಗಿತ್ತು. ಆಕ್ಷೇಪಣೆಗಳನ್ನು ಸ್ವೀಕರಿಸಿ ನಂತರ ಪರಿಷ್ಕರಿಸಿ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು.

ಸಿಇಟಿ ಫಲಿತಾಂಶ ಪ್ರಕಟಿಸಲು ಪ್ರತಿ ವರ್ಷ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಲಾಗುತ್ತಿತ್ತು. ಆದರೆ ಈ ವರ್ಷ ಕೋವಿಡ್‌ನ ಎರಡನೇ ಅಲೆಯ ಭಯದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮಾತ್ರ ಶ್ರೇಣಿಗಳನ್ನು ನೀಡಲು ಕೆಇಎ ನಿರ್ಧರಿಸಿದೆ.

ಸಿಇಟಿ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ಗೆ ಭೇಟಿ ನೀಡಿ.
ಸ್ಟೆಪ್ 2 :ಅಭ್ಯರ್ಥಿಗಳು ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಇತರೆ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 3: ಫಲಿತಾಂಶ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
KCET Result 2021 Releasing Today: Here Is How To Check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+