KEA Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಇಎ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅಕ್ಟೋಬರ್ 07,2021 ರಿಂದ ಪ್ರಾರಂಭವಾಗಿ ನವೆಂಬರ್ 06,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಳಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎನ್ಇಟಿ ಅಥವಾ ಕೆಸೆಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನವೆಂಬರ್ 06, 2021ರ ಅನ್ವಯ ಕನಿಷ್ಟ 22 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ (ಜನ್/ಯುಆರ್), 43 ವರ್ಷ (OBC-2A/2B/3A/3B) ಮತ್ತು 45 ವರ್ಷ (SC/ST ಮತ್ತು CAT-I) ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯುಜಿಸಿ ವೇತನ ಶ್ರೇಣಿ ಅನುಸಾರ ತಿಂಗಳಿಗೆ 57,700/- ರಿಂದ 1,82,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಅದರ ಅನ್ವಯ ಪರೀಕ್ಷೆಯು ಮಾರ್ಚ್ 12 ರಿಂದ 16,2022ರ ವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಕೆಇಎ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶೇ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
KEA released admit card 2022 for assistant professor posts. Here is how to download admit card.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+