ಪಿಯು ಶಿಕ್ಷಕರ ನೇಮಕಾತಿ: ಫೆಬ್ರವರಿ ತಿಂಗಳಲ್ಲಿ ಪರೀಕ್ಷೆ

Posted By:

ಕಳೆದ ಎರಡು ವರ್ಷಗಳಿಂದ ಕಾರಣಾಂತರಗಳಿಂದ ವಿಳಂಬವಾಗಿದ್ದ ಪಿಯುಸಿ ಉಪನ್ಯಾಸಕರ ನೇಮಕಾತಿಗೆ ಮತ್ತೆ ಜೀವ ಬಂದಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಡೆಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಕಾರ್ಮಿಕ ಇಲಾಖೆ: ಕರ್ನಾಟಕ ಕಾರ್ಮಿಕ ಆಧ್ಯಯನ ಸಂಸ್ಥೆ ನಿರ್ದೇಶಕರ ನೇಮಕಾತಿ

ಫೆಬ್ರವರಿ 23 ರಿಂದ 26 ರವರೆಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ವಿಷಯವಾರು ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಾಧಿಕಾರ ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

ಐಟಿಬಿಪಿ: ಹೆಡ್ ಕಾನ್ಸ್ ಟೇಬಲ್ ಮತ್ತು ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ

ಪಿಯು ಶಿಕ್ಷಕರ ನೇಮಕಾತಿ ಪರೀಕ್ಷೆ

ಪ್ರಾಧಿಕಾರದ ಈ ನಿಲುವಿನಿಂದ ಅರ್ಜಿ ಸಲ್ಲಿಸಿ ಬಹುದಿನಗಳಿಂದ ಕಾದು ಕೂತಿದ್ದ ಉದ್ಯೋಗಾಂಕ್ಷಿಗಳು ಕೊಂಚ ಸಮಾಧಾನ ಪಟ್ಟುಕೊಕೊಂಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 20 ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 1,203 ಹುದ್ದೆಗಳ ನೇಮಕಾತಿ ಮಾಡಲಿದೆ.

ಈ ಹಿಂದೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯನ್ನು ಮಿಸಲಾತಿ ಗೊಂದಲಗಳಿಂದ ಎರಡು ಬಾರಿ ಸ್ಥಗಿತಗೊಳಿಸಲಾಗಿತ್ತು.

2015 ರಲ್ಲಿ ನೇಮಕಾತಿ ಆದೇಶ ಹೊರಡಿಸಿದ್ದ ನಂತರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು, ಆನಂತರ ಜೂನ್ 2016 ರಲ್ಲಿ ಮತ್ತೊಮ್ಮೆ ಅಧಿಸೂಚನೆ ನೀಡಿ ಅರ್ಜಿ ಆಹ್ವಾನಿಸಿತ್ತು. ಮಿಸಲಾತಿ ಗೊಂದಲಗಳಿಂದ ಸ್ಥಗಿತಗೊಂಡು ಮತ್ತೊಮ್ಮೆ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಪ್ರಕ್ರಿಯೆ ಪುನರಾರಂಭಿಸಲಾಯಿತು.

ಏಪ್ರಿಲ್ ತಿಂಗಳಿನಲ್ಲಿ ಅರ್ಜಿ ಪ್ರಕ್ರಿಯೆ ಮುಗಿಸಿದ ಪ್ರಾಧಿಕಾರವು ಅರ್ಜಿಗಳ ಪರಿಶೀಲನೆ ಮುಗಿಸಿದ್ದು, ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವುದು ಬಾಕಿ ಉಳಿದಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯ ವೇಳಾಪಟ್ಟಿಯನ್ನು kea.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

English summary
Karnataka examination authority PU lecturers recruitment tests to be held from February 23 to 26, and the schedule will be announced on KEA website soon.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia