ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಕರ್ನಾಟಕ ಅರಣ್ಯ ಇಲಾಖೆಯು ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮತ್ತು ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅದರ ಅನ್ವಯ ಡಿಸೆಂಬರ್ 5,2021ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಅಧಿಸೂಚನೆಯಲ್ಲಿ ವೃತ್ತವಾರು ಅಧಿಸೂಚಿಸಿರುವ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡ 50 ಹಾಗೂ ಲಿಖಿತ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇ.50 ಅನ್ನು ಒಟ್ಟುಗೂಡಿಸಿ, ಮೆರಿಟ್ ಹಾಗೂ ಪ್ರವರ್ಗವಾರು ಮೀಸಲಾತಿ ಆಧಾರದ ಮೇಲೆ ಮತ್ತು ಪ್ರಸ್ತುತ ಚಾಲ್ತಿಯಲ್ಲಿನ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ವೃತ್ತವಾರು ಪ್ರತ್ಯೇಕವಾಗಿ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತು ಯಾವುದಾದರು ಆಕ್ಷೇಪಣೆ ಇದ್ದಲ್ಲಿ, ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಮಾತ್ರ ಈ ಕಛೇರಿಯ ಇ-ಮೇಲ್ ವಿಳಾಸಕ್ಕೆ ಫೆಬ್ರವರಿ 16,2022ರ ಸಂಜೆ 5:30ರೊಳಗೆ ಸಲ್ಲಿಸಬಹುದು.


Click it and Unblock the Notifications