ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಅರಣ್ಯ ಇಲಾಖೆಯು ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಇಲಾಖೆಯು 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ವೃತ್ತಗಳ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 5,2021ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1 : ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ https://kfdrecruitment.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ಕೆಳಭಾಗದಲ್ಲಿ ಲಭ್ಯವಿರುವ "Forest Guard Written Exam Hall Ticket Download Link" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ಅಪ್ಲಿಕೇಶನ್ ನಂಬರ್, ಜನ್ಮ ದಿನಾಂಕ ಮತ್ತು ಕ್ಯಾಪ್ಚಾ ನೀಡಿ ಲಾಗಿನ್ ಆಗಿ
ಸ್ಟೆಪ್ 4 : ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಲಿಖಿತ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗತಕ್ಕದ್ದು ಮತ್ತು ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











