ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ಅರಣ್ಯ ಇಲಾಖೆಯು ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಇಲಾಖೆಯು 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ 11 ವೃತ್ತಗಳ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 5,2021ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಿ ನಂತರ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ನಮೂನೆಯಲ್ಲಿ ನಮೂದಿಸಿ ಕಚೇರಿಯ kfdfg2021@gmail.com ಇ-ಮೇಲ್ ವಿಳಾಸಕ್ಕೆ ಡಿಸೆಂಬರ್ 13,2021ರ ಸಂಜೆ 5:30ರೊಳಗೆ ಸಲ್ಲಿಸಬಹುದು.
ಲಿಖಿತ ಪರೀಕ್ಷೆಯ ಕೀ ಉತ್ತರ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1 : ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ https://kfdrecruitment.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ಕೆಳಭಾಗದಲ್ಲಿ ಲಭ್ಯವಿರುವ " FG Written Exam Key Answer" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ಪ್ರಕಟಣೆಯನ್ನು ಓದಿ ನಂತರ ಪ್ರಶ್ನೆಗಳಿಗನುಸಾರ ಕೀ ಉತ್ತರಗಳನ್ನು ವೀಕ್ಷಿಸಿ
ಸ್ಟೆಪ್ 4 : ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳಿದ್ದಲ್ಲಿ, ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಇಮೇಲ್ ಮಾಡಿ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.