ಕೆಪಿಎಸ್‌ಸಿ 2019 ಎಸ್‌ಡಿಎ ಮತ್ತು ಎಫ್‌ಡಿಎ ಸಹಾಯಕ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಲೋಕ ಸೇವಾ ಆಯೋಗವು ಎಫ್‌ಡಿಎ ಮತ್ತು ಎಸ್‌ಡಿಎ ಸಹಾಯಕ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕೆಪಿಎಸ್‌ಸಿ ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಉಳಿಕೆ ಮೂಲ ವೃಂದದ ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಒಟ್ಟು 714 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಕೆಪಿಎಸ್‌ಸಿ ಎಫ್‌ಡಿಎ & ಎಸ್‌ಡಿಎ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಕಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ,ಸಾಮಾನ್ಯ ಕನ್ನಡ/ ಸಾಮಾನ್ಯ ಇಂಗ್ಲೀಷ್ ಮತ್ತು ಸಾಮಾನ್ಯ ಜ್ಞಾನವನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ಟರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಕೆಪಿಎಸ್‌ಸಿ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಅನುಸರಿಸಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಹೋಗಿ
ಸ್ಟೆಪ್ 2: ಅಭ್ಯರ್ಥಿಗಳು ಮೊದಲು ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನಮೂದಿಸಿ ಲಾಗಿನ್ ಆಗಿ
ಸ್ಟೆಪ್ 3: ನಂತರ My Application ಮೇಲೆ ಕ್ಲಿಕ್ ಮಾಡಿ ನಂತರ 2019 ಎಂದು ವರ್ಷ ನಮೂದಿಸಿ
ಸ್ಟೆಪ್ 4: ನಂತರ Advertisement Type ನಲ್ಲಿ Direct Recruitment ಅನ್ನು select ಮಾಡಿ
ಸ್ಟೆಪ್ 5: ನಂತರ ಅಭ್ಯರ್ಥಿಗಳು Posts name "E(2) 7271/2018-19/PSC FDA/SDA COMPETITIVE EXAM-2019" ಎಂಬುದನ್ನು ಕ್ಲಿಕ್ ಮಾಡಿ
ಸ್ಟೆಪ್ 6: ನಂತರ Check Box ಅನ್ನು ಟಿಕ್ ಮಾಡಿದ ಮೇಲೆ Hall Ticket ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7: ನಂತರ print ಅನ್ನು ಕ್ಲಿಕ್ ಮಾಡಿದ್ದಲ್ಲಿ ನೀವು ಪ್ರವೇಶ ಪತ್ರವನ್ನು Download ಮಾಡಿಕೊಳ್ಳಬಹುದು.
ಸ್ಟೆಪ್ 8: ಅಭ್ಯರ್ಥಿಗಳು Download ಮಾಡಿಕೊಂಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಒಯ್ಯತಕ್ಕದ್ದು, ಇಲ್ಲವಾದಲ್ಲಿ ಅವರನ್ನು ಪರೀಕ್ಷೆಗೆ ಹಾಜರುಪಡಿಸಲು ಸಾಧ್ಯವಿರುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ ಸೈಟ್‌ನಲ್ಲಿ ವೀಕ್ಷಿಸಬಹುದು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪ್ರವೇಶ ಪತ್ರ ಬಿಡುಗಡೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka Public Service Commission (KPSC) Recruitment 2019 released the admit card for SDA and FDA entrance exam
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X