ಕರ್ನಾಟಕ ಲೋಕಸೇವಾ ಆಯೋಗವು ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7,2020ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದೆ.

ಆಯೋಗವು ನಡೆಸಲಿರುವ ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದೆ.
ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7,2020ರ ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ಪರೀಕ್ಷಾ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











