ಕೆಪಿಎಸ್‌ಸಿ: ನಾಳೆ ಎಫ್‌ಡಿಎ ಪರೀಕ್ಷೆ ಇಲ್ಲ

ಫೆ.4 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುವ ಸಾದ್ಯತೆ ಇದ್ದು, ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕರ ನೇಮಕಾತಿಗೆ ನಡೆಯಬೇಕಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ.

ಕೆಪಿಎಸ್ಸಿ: ಎಫ್ ಡಿ ಎ ಪರೀಕ್ಷೆ ಪ್ರಶ್ನೆ ಪತ್ರಿಕೆಕೆಪಿಎಸ್ಸಿ: ಎಫ್ ಡಿ ಎ ಪರೀಕ್ಷೆ ಪ್ರಶ್ನೆ ಪತ್ರಿಕೆ

ಲೋಕಸೇವಾ ಆಯೋಗದಿಂದ ಫೆಬ್ರವರಿ 4 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನಡೆಸಬೇಕಿತ್ತು, ಅನಿವಾರ್ಯ ಕಾರಣಗಳಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಫ್ ಡಿ ಎ, ಎಸ್ ಡಿ ಎ ಪರೀಕ್ಷೆ ಪಾಸ್ ಆಗಲು ಸುಲಭ ವಿಧಾನ

ಎಫ್‌ಡಿಎ ಪರೀಕ್ಷೆ ಮುಂದಕ್ಕೆ

ಮುಂದೂಡಲು ಪ್ರಮುಖ ಕಾರಣ

ಫೆ.4 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುವ ಸಾದ್ಯತೆ ಇದ್ದು, ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಲಾಗಿದೆ.

ಈ ಹಿಂದೆ ನಿಗದಿಯಾದಂತೆ ಎಫ್‌ಡಿಎ ಹುದ್ದೆಗಳಿಗೆ ಫೆಬ್ರವರಿ 4 ರಂದು ಹಾಗೂ ಎಸ್‌ಡಿಎ ಹುದ್ದೆಗಳಿಗೆ ಫೆಬ್ರವರಿ 11ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಫೆಬ್ರವರಿ 10ರಂದು ನಡೆಸಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು.

ಎಫ್‌ಡಿಎ ಪರೀಕ್ಷೆ ಮುಂದಕ್ಕೆ

ಒಟ್ಟು 1, 812 ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ನೇಮಕಾತಿ ನಡೆಯಲಿದೆ. ಪ್ರಥಮ ದರ್ಜೆ ಸಹಾಯಕರು ಒಟ್ಟು 961 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಒಟ್ಟು 851 ಹುದ್ದೆಗಳ ನೇಮಕಾತಿಗೆ ಸೆಪ್ಟಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿತ್ತು.

961 ಎಫ್‌ಡಿಎ ಹುದ್ದೆಗಳಿಗೆ ಸುಮಾರು ಐದು ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, 851 ಎಸ್‌ಡಿಎ ಹುದ್ದೆಗಳಿಗೆ ಏಳು ಲಕ್ಷಕ್ಕು ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಒಟ್ಟಾರೆಯಾಗಿ ಈ ಬಾರಿಯ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸುಮಾರು ಹನ್ನೆರಡು ಲಕ್ಷಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

For Quick Alerts
ALLOW NOTIFICATIONS  
For Daily Alerts

English summary
KPSC has released the Pressnote regarding postponement of FDA Examination to be held on 4-2-2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X