ಕೆಪಿಎಸ್‌ಸಿ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ನೇಮಕಾತಿಯ ಸ್ಪರ್ದಾತ್ಮಕ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ ಖಾಲಿ ಇರುವ 844 ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಮಾರ್ಚ್ 20,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಲಿದ್ದು ಇದೀಗ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಪ್ರಥಮ ದರ್ಜೆ ಸಹಾಯಕರು /ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಜೂನ್ 8ಶನಿವಾರದಂದು ನಡೆಯಲಿದೆ. ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಜೂನ್ 9 ಭಾನುವಾರದಂದು ನಡೆಯಲಿದೆ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 16,2019 ಭಾನವಾರದಂದು ನಡೆಯಲಿದೆ.
ಅಭ್ಯರ್ಥಿಗಳು ಪರೀಕ್ಷಾ ದಿನಾಂಕ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











