KPSC Group C Non Technical Answer Key : ಕೀ ಉತ್ತರ ಪ್ರಕಟ... ಆಕ್ಷೇಪಣೆ ಸಲ್ಲಿಸಲು ಜ.11 ಕೊನೆಯ ದಿನ

ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಜನವರಿ 11,2022ರೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕೆಪಿಎಸ್ಸಿ ಗ್ರೂಪ್ ಸಿ ಕೀ ಉತ್ತರ ಪ್ರಕಟ.. ಆಕ್ಷೇಪಣೆ ಸಲ್ಲಿಸಲು ಜ.11 ಕೊನೆಯ ದಿನ

ಕರ್ನಾಟಕ ಲೋಕಸೇವಾ ಆಯೋಗ 523 ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು
ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಸೆಪ್ಟೆಂಬರ್ 19,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಕೆಪಿಎಸ್ಸಿ ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/-ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಕೆಪಿಎಸ್ಸಿ ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು. ಡಿಸೆಂಬರ್ 19,2021ರಂದು ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಇದೀಗ ಪ್ರಕಟ ಮಾಡಲಾಗಿದೆ. ಕೀ ಉತ್ತರಗಳನ್ನು ವೀಕ್ಷಿಸಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ ಸಲ್ಲಿಸಬೇಕಿರುತ್ತದೆ. ಜೊತೆಗೆ ಪ್ರತಿ ಪ್ರಶ್ನೆಗೆ 50/-ರೂ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 11,2022ರ ಸಂಜೆ 5:30ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಆಕ್ಷೇಪಣೆಗಳನ್ನು ಕಳುಹಿಸಿಕೊಡಬಹುದು. ತದನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ಹೇಳಿದೆ.

ಕೆಪಿಎಸ್ಸಿ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಕೀ ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕ್ರ.ಸಂಖ್ಯೆ ಜೊತೆಗೆ ಕೀ-ಉತ್ತರಗಳು ಲಭ್ಯವಿರುತ್ತವೆ ಅದನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KPSC released group C non technical answer key. Applicants can check answer key and raise objections before january 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X