ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಎಸ್ಸಿ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಸೆಪ್ಟೆಂಬರ್ 18,2021 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 19,2021ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
2019ನೇ ಸಾಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಲಿಪಿಕಾರರ ಅವಶ್ಯಕತೆಯಿರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಲಾಗಿನ್ ಐ.ಡಿ ಮತ್ತು ಪಾಸ್‌ವರ್ಡ್ ಉಪಯೋಗಿಸಿ ಆಯೋಗದ ಅಂತರ್ಜಾಲದಲ್ಲಿ ಲಿಪಿಕಾರರ ಮಾಹಿತಿಯನ್ನು ಕಡ್ಡಾಯವಾಗಿ ಭರ್ತಿ ಮಾಡುವುದು. ಭರ್ತಿ ಮಾಡಿದ ನಂತರ ಸದರಿ ಪರೀಕ್ಷೆಗಳ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು.
ಕೆಪಿಎಸ್ಸಿ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಪ್ರವೇಶ ಪತ್ರವನ್ನು ಹೇಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಲಿಪಿಕಾರರ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.


Click it and Unblock the Notifications











