KPSC SDA 2021 Answer Key : ಎಸ್‌ಡಿಎ ಪರೀಕ್ಷೆಯ ಕೀ ಉತ್ತರ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 29,2021ರೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕೆಪಿಎಸ್ಸಿ ಎಸ್‌ಡಿಎ ಕೀ ಉತ್ತರ ಪ್ರಕಟ.. ಆಕ್ಷೇಪಣೆ ಸಲ್ಲಿಸಲು ಸೆ.29 ಕೊನೆಯ ದಿನ

ಕರ್ನಾಟಕ ಲೋಕ ಸೇವಾ ಆಯೋಗವು ಒಟ್ಟು 1279 ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 1,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಕನ್ನಡ ಭಾಷಾ ಪರೀಕ್ಷೆಯನ್ನು ಸೆಪ್ಟೆಂಬರ್ 18 ರಂದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಸೆಪ್ಟೆಂಬರ್ 19,2021ರಂದು ನಡೆಸಲಾಗಿತ್ತು. ಈ ಭಾರಿ 1279 ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರ ವೀಕ್ಷಿಸಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ ಸಲ್ಲಿಸಬೇಕಿರುತ್ತದೆ. ಜೊತೆಗೆ ಪ್ರತಿ ಪ್ರಶ್ನೆಗೆ 50/-ರೂ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 29,2021ರ ಸಂಜೆ 5:30ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಆಕ್ಷೇಪಣೆಗಳನ್ನು ಕಳುಹಿಸಿಕೊಡಬಹುದು. ತದನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ಹೇಳಿದೆ.

ಕೆಪಿಎಸ್ಸಿ ಎಸ್‌ಡಿಎ ಪರೀಕ್ಷೆಯ ಕೀ ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕ್ರ.ಸಂಖ್ಯೆ ಜೊತೆಗೆ ಪರಿಷ್ಕೃತ ಕೀ-ಉತ್ತರಗಳು ಲಭ್ಯವಿರುತ್ತವೆ ಅದನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳು ಕೀ ಉತ್ತರಗಳಿಗೆ ಸಂಬಂಧಿತ ಆಕ್ಷೇಪಣೆ ಸಲ್ಲಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC released junior assistant/SDA exam answer key. Applicants can check answer key and raise objections before september 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+