ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 29,2021ರೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಲೋಕ ಸೇವಾ ಆಯೋಗವು ಒಟ್ಟು 1279 ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 1,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಕನ್ನಡ ಭಾಷಾ ಪರೀಕ್ಷೆಯನ್ನು ಸೆಪ್ಟೆಂಬರ್ 18 ರಂದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಸೆಪ್ಟೆಂಬರ್ 19,2021ರಂದು ನಡೆಸಲಾಗಿತ್ತು. ಈ ಭಾರಿ 1279 ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರ ವೀಕ್ಷಿಸಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ ಸಲ್ಲಿಸಬೇಕಿರುತ್ತದೆ. ಜೊತೆಗೆ ಪ್ರತಿ ಪ್ರಶ್ನೆಗೆ 50/-ರೂ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 29,2021ರ ಸಂಜೆ 5:30ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಆಕ್ಷೇಪಣೆಗಳನ್ನು ಕಳುಹಿಸಿಕೊಡಬಹುದು. ತದನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ಹೇಳಿದೆ.
ಕೆಪಿಎಸ್ಸಿ ಎಸ್ಡಿಎ ಪರೀಕ್ಷೆಯ ಕೀ ಉತ್ತರ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕ್ರ.ಸಂಖ್ಯೆ ಜೊತೆಗೆ ಪರಿಷ್ಕೃತ ಕೀ-ಉತ್ತರಗಳು ಲಭ್ಯವಿರುತ್ತವೆ ಅದನ್ನು ಪರಿಶೀಲಿಸಬಹುದು.
ಅಭ್ಯರ್ಥಿಗಳು ಕೀ ಉತ್ತರಗಳಿಗೆ ಸಂಬಂಧಿತ ಆಕ್ಷೇಪಣೆ ಸಲ್ಲಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.