KPSC : ಗ್ರೂಪ್-ಎ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಅರ್ಹತಾ ಮತ್ತು ಕಟ್‌ಆಫ್ ಲೀಸ್ಟ್ ಪ್ರಕಟ

ಕೆಪಿಎಸ್ಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅರ್ಹತಾ ಮತ್ತು ಕಟ್‌ಆಫ್ ಪಟ್ಟಿ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್-ಎ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅರ್ಹತಾ ಮತ್ತು ಕಟ್‌ಆಫ್ ಅಂಕಗಳನ್ನು ಪ್ರಕಟ ಮಾಡಿದೆ.

ಕೆಪಿಎಸ್ಸಿ ಅಕ್ಟೋಬರ್ 11,2020ರ ಭಾನುವಾರದಂದು ನಡೆಸಿದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ 'ಎ' ವೃಂದದ ಒಟ್ಟು 24 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:10 ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೊಂದಣಿ ಸಂಖ್ಯೆಗಳ ಪಟ್ಟಿ ಹಾಗೂ ಕಟ್‌ಆಫ್ ಅಂಕಗಳನ್ನು ಆಯೋಗದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳು ಅರ್ಹತಾ ಪಟ್ಟಿ ಮತ್ತು ಅಂಕಗಳನ್ನು ಚೆಕ್ ಮಾಡಿಕೊಳ್ಳಬಹುದು. ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
kpsc released eligibility and cut off list of candidates for group 'A' assistant conservator of forest posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X