ಕರ್ನಾಟಕ ಲೋಕಸೇವಾ ಆಯೋಗವು ಮಾರ್ಚ್ 20 ಮತ್ತು 21,2021ರಂದು ನಡೆಯಬೇಕಿರುವ ಕಿರಿಯ ದರ್ಜೆ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜೂನ್ 6,2020ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಜೂನ್ 7,2020ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ದಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸದರಿ ಪರೀಕ್ಷೆಗಳನ್ನು ಮುಂಡೂಡಿ ಮಾರ್ಚ್ 20,2020ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ಮಾರ್ಚ್ 21,2020ರಂದು ಸ್ಪರ್ದಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿತ್ತು.
ಕೆಪಿಎಸ್ಸಿ ಪ್ರಥಮ ದರ್ಜೆ ಸಹಾಯಕರು/ಸಹಾಯಕರು ಹುದ್ದೆಗಳ ಪರೀಕ್ಷೆಯನ್ನು ಫೆಬ್ರವರಿ 28,2021ರಂದು ನಡೆಸಲಾಗಿರುವುದರಿಂದ, ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಕೈಗೊಳ್ಳಲು ಆಯೋಗಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವುದರಿಂದ ಆಯೋಗವು ಮಾರ್ಚ್ 20,2021 (ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ) ಮತ್ತು ಮಾರ್ಚ್ 21,2021ರಂದು (ಸ್ಪರ್ಧಾತ್ಮಕ ಪರೀಕ್ಷೆ) ನಡೆಯಬೇಕಾದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದರಿ ಪರೀಕ್ಷೆಯ ಪರಿಷ್ಕೃತ ದಿನಾಂಕದ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಕೆಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪರೀಕ್ಷೆ ಮುಂದೂಡಿಕೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











