KPTCL: 5 ಕಿರಿಯ ಇಂಜಿನಿಯರ್ (ಸಿವಿಲ್) ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳ ನೇಮಕಾತಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 5 ಕಿರಿಯ ಇಂಜಿನಿಯರ್ (ಸಿವಿಲ್) ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಕೆಪಿಟಿಸಿಎಲ್‌ನಲ್ಲಿ 5 ಹುದ್ದೆಗಳಿವೆ..ಜ20ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಕಿರಿಯ ಇಂಜಿನಿಯರ್ (ಸಿವಿಲ್) , ಕಿರಿಯ ಆಪ್ತ ಸಹಾಯಕ
Organisation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
Educational Qualification ಹತ್ತನೇ ತರಗತಿ, ಸಿವಿಲ್‌ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ಕಿರಿಯ ಇಂಜಿನಿಯರ್ (ಸಿವಿಲ್) -ತಿಂಗಳಿಗೆ 26,270/-ರಿಂದ 65,020/-ರೂ ಮತ್ತು ಕಿರಿಯ ಆಪ್ತ ಸಹಾಯಕ-ತಿಂಗಳಿಗೆ 22,920/- ರಿಂದ 56,320/-ರೂ
Application Start Date January 6, 2020
Application End Date January 20, 2020

ವಿದ್ಯಾರ್ಹತೆ:

ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಸಿವಿಲ್‌ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಪ್ರೌಢ ದರ್ಜೆಯಲ್ಲಿ ಶೀಘ್ರಲಿಪಿ ಮತ್ತು ಪ್ರೌಢದರ್ಜೆಯಲ್ಲಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 20,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,270/-ರಿಂದ 65,020/-ರೂ ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,920/- ರಿಂದ 56,320/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್ ಆಪ್ಟಿಟ್ಯೂಡ್ ಟೆಸ್ಟ್
ಮತ್ತು ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರೌಢದರ್ಜೆ ಬೆರಳಚ್ಚುಗಾರ ಮತ್ತು ಪ್ರೌಢದರ್ಜೆ ಶೀಘ್ರಲಿಪಿಗಾರ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಜನವರಿ 21,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್‌ http://www.kptcl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2020ರ ಸಂಜೆ 5ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPTCL recruitment notification has been released in official website for the recruitment of 5 junior engineer and junior personal assistant posts. Interested candidates can apply through online before 20th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+