
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟ ಮಾಡಿದೆ.
ವಿಶ್ವವಿದ್ಯಾಲಯವು ಏಪ್ರಿಲ್ 11,2021ರಂದು ಕೆಸೆಟ್ ಪರೀಕ್ಷೆಯನ್ನು ನಡೆಸಲು ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಇದೀಗ ಪರಿಷ್ಕೃತ ದಿನಾಂಕವನ್ನು ಪ್ರಕಟ ಮಾಡಿದ್ದು, ಸದರಿ ಕೆಸೆಟ್ ಪರೀಕ್ಷೆ 2021 ಅನ್ನು ಜುಲೈ 25,2021ರಂದು ನಡೆಸಲು ತೀರ್ಮಾನಿಸಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ http://kset.uni-mysore.ac.in/ ಗೆ ಭೇಟಿ ನೀಡುತ್ತಿರತಕ್ಕದ್ದು.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts