
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟ ಮಾಡಿದೆ.
ವಿಶ್ವವಿದ್ಯಾಲಯವು ಏಪ್ರಿಲ್ 11,2021ರಂದು ಕೆಸೆಟ್ ಪರೀಕ್ಷೆಯನ್ನು ನಡೆಸಲು ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಕೆಸೆಟ್ ಪರೀಕ್ಷೆ 2021 ಅನ್ನು ಏಪ್ರಿಲ್ 25,2021ರಂದು ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ.
ಅಧಿಕೃತ ಪ್ರಕಟಣೆಯಲ್ಲಿ ಕೆಸೆಟ್ 2021ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ಕರ್ನಾಟಕ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರುತ್ತಾ, ಸದರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಕೋರಲಾಗಿದೆ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts


Click it and Unblock the Notifications











