Corona Effect: KSET-2020 ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2020 (ಕೆ-ಸೆಟ್‌)ಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ.

ಕೆಎಸ್ಇಟಿ ಪರೀಕ್ಷೆಗೆ ಮೇ.25ರೊಳಗೆ ಅರ್ಜಿ ಹಾಕಿ

ಕೊರೊನಾದಿಂದ ಉಂಟಾದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ವಂಚಿತರಾದ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು 250/-ರೂ ದಂಡ ಶುಲ್ಕದೊಂದಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕೆಸೆಟ್ ಪರೀಕ್ಷೆಯ ದಿನಾಂಕವನ್ನು ಅತೀ ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗುವುದು. ಅಭ್ಯರ್ಥಿಗಳು ಆಗಾಗ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳುತ್ತಿರತಕ್ಕದ್ದು.

KSET 2020 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆ:

ವಿದ್ಯಾರ್ಹತೆ:

- ಸಾಮಾನ್ಯ ವರ್ಗದ ಮತ್ತು ಮೀಸಲಾತಿಗೆ ಒಳಪಡದ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

- ಸ್ನಾತಕೋತ್ತರ ಪದವಿಯಲ್ಲಿ ಮೊದಲ ವರ್ಷ ಮತ್ತು ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಥವಾ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಕೆಎಸ್ಇಟಿ ಪರೀಕ್ಷೆಯ ಅಧಿಕೃತ ವೆಬ್‌ಸೈಟ್‌ http://kset.uni-mysore.ac.in/ ಗೆ ಭೇಟಿ ನೀಡಿ. ಅಲ್ಲಿ 'KSET 2020 Examination -Online Application' ಗೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ. ನಂತರ ಕೇಳಲಾಗಿರುವ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
kset exam 2020 application date extended to till may 25 due to covid-19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+